ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ/ಕಾಲೇಜು ಇಲ್ಲಿನ ಸಂಸ್ಥಾಪಕರ ದಿನಾಚರಣೆಯನ್ನು ಸಂಸ್ಥಾಪಕ ಗಿರೀಶ್ ಕೆ.ಹೆಚ್. ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ ನ ಉಪನ್ಯಾಸಕ ಅಶ್ವಿತ್ ಕುಲಾಲ್ ಅವರು ಉಪಸ್ಥಿತರಿದ್ದು, ಸಂಸ್ಥಾಪಕರ ಸತತ ಪರಿಶ್ರಮ ಛಲ ಬಿಡದ ಪ್ರಯತ್ನವೇ ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಪಡೆಯಲು ಕಾರಣ ಎಂದರು. ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಉಷಾ ಜಿ. ಸ್ವಾಗತಿಸಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಕ್ಷಿತ್ ಕುಲಾಲ್ ಬಿ.ಇ. ವಂದಿಸಿದರು. ಕಾಲೇಜಿನ ಹಿಂದಿ ಉಪನ್ಯಾಸಕಿ ಸುಧಾ ಮತ್ತು ಪ್ರಾಥಮಿಕ ವಿಭಾಗದ ಉಪಮುಖ್ಯ ಶಿಕ್ಷಕಿ ಪವಿತ್ರ ಕಾರ್‍ಯಕ್ರಮ ನಿರೂಪಿಸಿದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಕು.ಅಕ್ಷತಾ ,ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಯಲ್.ಯನ್.ರಾವ್, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


