Friday, June 27, 2025

*ನೆಟ್ಲಮುಡ್ನೂರು : ಇಂದಿರಾ ಕ್ಷೇಮ ನಿಧಿಯಿಂದ ಕಿಟ್ ವಿತರಣೆ*

ವಿಟ್ಲ : ಜೂ, 17. ಕೋವಿಡ್-19 ಎರಡನೇ ಅಲೆಯ ಸಂದಿಗ್ಧ ಸಂದರ್ಭದಲ್ಲಿ ಇಂದಿರಾ ಕ್ಷೇಮ ನಿಧಿಯ ವತಿಯಿಂದ ನೆಟ್ಲಮುಡ್ನೂರು ಗ್ರಾಮದಲ್ಲಿ ಕೋವಿಡ್ ಪಾಸಿಟಿವ್ ಇರುವ 21 ಮನೆಗಳಿಗೆ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ಗುರುವಾರ ವಿತರಿಸಲಾಯಿತು.

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಮಾಜಿ ಸಚಿವ ಬಿ. ರಮಾನಾಥ ರೈ ಯವರ ಮುಂದಾಳತ್ವದಲ್ಲಿ ನಿರಂತರ ವಾಗಿ ನಡೆಯುವ ಕಾರ್ಯಕ್ರಮದ ಅಂಗವಾಗಿ ಈ ಆಹಾರ ಸಾಮಾಗ್ರಿಗಳ ಕಿಟ್ಟನ್ನು ಬಿ.ರಮಾನಾಥ ರೈ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ನಿರಂಜನ್ ರೈ ಕುರ್ಲೆತ್ತಿಮಾರು, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲು, ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಧರ ರೈ, ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಸದಸ್ಯರುಗಳಾದ ಲತೀಫ್ ನೇರಳಕಟ್ಟೆ, ಪ್ರೇಮಾ, ಲಕ್ಷ್ಮೀ, ಪಕ್ಷ ಪ್ರಮುಖರಾದ ಯೂಸುಫ್ ಹಾಜಿ ಕೊಡಾಜೆ, ಅದ್ದ ಹಾಜಿ ಕೊಡಾಜೆ, ದೇರಣ್ಣ ಪೂಜಾರಿ, ನಾರಾಯಣ ಗೌಡ, ಎನ್.ಕೆ.ಅಬೂಬಕ್ಕರ್, ಪಿ.ಕೆ.ಅಬ್ಬಾಸ್ ಪರ್ಲೊಟ್ಟು, ಸಿದ್ದೀಕ್ ಪರ್ಲೊಟ್ಟು, ಶೇಖರ ಮೀನಾವು, ಹಮೀದ್ ಸಕ್ಸಸ್, ಸಿದ್ದೀಕ್ ಸರವು, ಅರ್ಶದ್ ಸರವು, ಸಿರಾಜ್ ಮದಕ, ಹರ್ಷದ್ ಕುಕ್ಕಿಲ, ಮೊದಲಾದವರು ಉಪಸ್ಥಿತರಿದ್ದರು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...