Monday, February 2, 2026

7 ರಿಂದ 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸ್ – ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯದಲ್ಲಿನ 7, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಿಲ್ಲ. ಈ ವರ್ಷ ಎಲ್ಲರನ್ನೂ ಪಾಸ್ ಮಾಡಲಾಗುತ್ತದೆ. ಆದ್ರೇ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಏಪ್ರಿಲ್ 14ರ ನಂತ್ರ ಶೀಘ್ರದಲ್ಲಿಯೇ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಸಚಿವ ಸುರೇಶ್ ಕುಮಾರ್ ಫೇಸ್ ಬುಕ್ ನಲ್ಲಿ ಲೈವ್ ಮೂಲಕ ಮಾತನಾಡಿದರು.
ಮಾ.13 ರಂದು ಲಾಕ್ ಡೌನ್ ನಂತ್ರ, ಒಂದರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ ಆ ನಂತರ 7ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಯಿತು. ಹೀಗಾಗಿ ಈ ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದಂತೆ ಈ ವರ್ಷ ಪಾಸ್ ಮಾಡಲಾಗುತ್ತದೆ ಎಂದು ತಿಳಿಸಿದರು.
7ನೇ ಹಾಗೂ 8ನೇ ತರಗತಿ ವಿದ್ಯಾರ್ಥಿಗಳನ್ನು ಅವರು ಈ ಹಿಂದಿನ ತರಗತಿಯ ಪರೀಕ್ಷಾ ಅಂಕಗಳ ಆಧಾರದ ಮೇಲೆ ಪಾಸ್ ಮಾಡಲಾಗುತ್ತದೆ. 9ನೇ ತರಗತಿಯ ವಿದ್ಯಾರ್ಥಿಗಳಿಗೆ ಈಗಾಗಲೇ ನಡೆಸಲಾಗಿರುವಂತ ಗುಣಾತ್ಮಕ ಮತ್ತು ರೂಪಣಾತ್ಮಕ ಪರೀಕ್ಷೆಯ ಆಧಾರದ ಮೇಲೆ ಪಾಸ್ ಮಾಡಲಾಗುತ್ತದೆ. ಒಂದು ವೇಳೆ ಫೇಲ್ ಆಂದ್ರೇ ಶಿಕ್ಷಕರು ಅಂತಹ ವಿದ್ಯಾರ್ಥಿಗಳಿಗೆ ಬೋಧನೆ ಮಾಡಿ, ಪಾಸ್ ಮಾಡಲು ಸೂಚಿಸಲಾಗಿದೆ ಎಂದರು ಹೇಳಿದರು.

ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಬಗ್ಗೆ ಏಪ್ರಿಲ್ 14ರ ನಂತ್ರ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗಳು, ಪೋಷಕರು ಗೊಂದಲಕ್ಕೆ ಒಳಗಾಗಬಾರದು. ಪರೀಕ್ಷೆ ಇಲ್ಲ ಅಂತ ಯಾವುದೇ ವಿದ್ಯಾರ್ಥಿಗಳು ಹೊರಗೆ ಬರಬಾರದು. ಮನೆಯಲ್ಲಿಯೇ ಕುಳಿತುಕೊಂಡು ಬೇರೆ ವಿಷಯಗಳನ್ನು ಕಲಿಯುವಂತೆ ಸೂಚನೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೀಡಿದರು.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...