Friday, January 30, 2026

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7, ಉಡುಪಿಯಲ್ಲಿ 3 ನಾಮಪತ್ರಗಳು ತಿರಸ್ಕೃತ

ಮಂಗಳೂರು/ಉಡುಪಿ: ವಿಧಾನಸಭಾ ಚುನಾವಣೆ ಸಂಬಂಧ ನಾಮಪತ್ರ ಪರಿಶೀಲನೆ ನಡೆಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7 ಹಾಗೂ ಉಡುಪಿ ಜಿಲ್ಲೆಯಲ್ಲಿ 3 ನಾಮಪತ್ರಗಳು ತಿರಸ್ಕೃತಗೊಂಡಿವೆ.

ಒಟ್ಟು ದ.ಕ ಜಿಲ್ಲೆಯಲ್ಲಿ 72 ಅಭ್ಯರ್ಥಿಗಳು ಹಾಗೂ ಉಡುಪಿ ಜಿಲ್ಲೆಯಲ್ಲಿ 39 ಮಂದಿಯ ನಾಮಪತ್ರಗಳು ಸ್ವೀಕಾರಗೊಂಡಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 109 ನಾಮಪತ್ರ ಸಲ್ಲಿಕೆಯಾಗಿದ್ದರೆ, ಉಡುಪಿ ಜಿಲ್ಲೆಯಲ್ಲಿ 88 ನಾಮಪತ್ರ ಸಲ್ಲಿಕೆಯಾಗಿದ್ದವು.

ಮಂಗಳೂರು ನಗರ ಉತ್ತರದಲ್ಲಿ ಒಂದು ಹಾಗೂ ಮಂಗಳೂರು ನಗರ ದಕ್ಷಿಣ, ಮಂಗಳೂರು ಹಾಗೂ ಬಂಟ್ವಾಳದಲ್ಲಿ ತಲಾ ಎರಡು ನಾಮಪತ್ರಗಳು ತಿರಸ್ಕೃತಗೊಂಡಿವೆ. ಹಾಗೆಯೇ ಉಡುಪಿ ಜಿಲ್ಲೆಯ ಕುಂದಾಪುರ ದಿಂದ ಶಂಕರ ಅಂಕದಕಟ್ಟೆ, ಕಾರ್ಕಳ ದಿಂದ ಉದಯಕುಮಾರ್‌ ಎಂ., ದಯಾನಂದ ಶೆಟ್ಟಿಯವರ ನಾಮಪತ್ರ ತಿರಸ್ಕೃತಗೊಂಡಿದೆ.

ಬೆಳ್ತಂಗಡಿ -10, ಮೂಡುಬಿದಿರೆ ಯಲ್ಲಿ – 9, ಮಂಗಳೂರು ನಗರ ಉತ್ತರ -12, ಮಂಗಳೂರು ನಗರ ದಕ್ಷಿಣ -8, ಮಂಗಳೂರು -8, ಬಂಟ್ವಾಳ -6, ಪುತ್ತೂರು -10 ಹಾಗೂ ಸುಳ್ಯದ 9 ಅಭ್ಯರ್ಥಿಗಳ ನಾಮಪತ್ರಗಳು ಕ್ರಮ ಬದ್ಧವಾಗಿವೆ.

 

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...