Monday, February 10, 2025

’ಎನ್ನೆಸ್ಸೆಸ್ ಮೂಲಕ ವಿದ್ಯಾರ್ಥಿಗಳಿಗೆ ಮೌಲ್ಯ ಶಿಕ್ಷಣ’

ವಿಟ್ಲ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಚಟುವಟಿಕೆಗಳು ಎನ್ನೆಸ್ಸೆಸ್‌ನಲ್ಲಿ ಇದ್ದು ಇವು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಮಾತ್ರವಲ್ಲದೇ ಮೌಲ್ಯ ಶಿಕ್ಷಣವನ್ನು ನೀಡುವ ಒಂದು ದೊಡ್ಡ ಸಂಸ್ಥೆಯಾಗಿದೆ. ವಿದ್ಯಾರ್ಥಿಗಳು ಸದ್ವಿನಿಯೋಗಿಸಿಕೊಳ್ಳಬೇಕೆಂದು ಎಂದು ವಿಟ್ಲ ರೋಟರಿ ಕ್ಲಬ್ ಜಯರಾಮ ರೈ ಪಿ. ಹೇಳಿದರು.
ಅವರು ವಿಠಲ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2019-20ನೇ ಸಾಲಿನ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಲಯನ್ಸ್ ಕ್ಲಬ್ ಇದರ ಅಧ್ಯಕ್ಷ ಲ| ಸಂತೋಷ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿ ಬದುಕಿನಲ್ಲಿ ಇಂತಹ ಚಟುವಟಿಕೆಗಳು ತುಂಬಾ ಅರ್ಥಪೂರ್ಣವಾದುದು ಎಂದರು. ಜೆಸಿಐ ವಿಟ್ಲದ ಅಧ್ಯಕ್ಷ ಬಾಲಕೃಷ್ಣ ಮಾತನಾಡಿ ಜೆಸಿಐ ಸಂಸ್ಥೆಯಂತೆ ಎನ್ನೆಸ್ಸೆಸ್ ಕೂಡ ವ್ಯಕ್ತಿತ್ವ ವಿಕಸನ ಮಾಡುವ ಸಂಸ್ಥೆ ಎಂದರು.
ಸಭಾಧ್ಯಕ್ಷತೆಯನ್ನು ವಿಠಲ ವಿದ್ಯಾ ಸಂಘದ ಸಂಚಾಲಕರಾದ ಎಲ್.ಎನ್.ಕೂಡೂರು ವಹಿಸಿದ್ದರು. ರೋಟರಿ ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ಡಾ. ಚರಣ್ ಕಜೆ, ವಿಠಲ ವಿದ್ಯಾ ಸಂಘದ ಕೋಶಾಧಿಕಾರಿ ನಿತ್ಯಾನಂದ್ ನಾಯಕ್, ಸದಸ್ಯರಾದ ಪದ್ಮಯ್ಯ ಗೌಡ, ಬಾಬು ಕೆ.ವಿ., ಆಡಳಿತಾಧಿಕಾರಿ ಪ್ರಶಾಂತ್ ಚೊಕ್ಕಾಡಿ ಉಪಸ್ಥಿತರಿದ್ದರು.
ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಅಣ್ಣಪ್ಪ ಸಾಸ್ತಾನ ಸ್ವಾಗತಿಸಿದರು. ಸ್ವಪ್ನ ಮತ್ತು ಬಳಗ ಪ್ರಾರ್ಥಿಸಿದರು. ಎನ್ನೆಸ್ಸೆಸ್ ನಾಯಕ ಶಿವಪ್ರಸಾದ್ ವಂದಿಸಿದರು. ವಿದ್ಯಾರ್ಥಿನಿ ಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

More from the blog

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...