Tuesday, January 27, 2026

ಮಕ್ಕಳನ್ನು ಸಂಸ್ಕೃತಿಯ ಹರಿಕಾರರನ್ನಾಗಿಸಬೇಕು – ಒಡಿಯೂರು ಶ್ರೀ

ಒಡಿಯೂರು: ಅರಿಷಡ್ವೈರಿಗಳನ್ನು ಶೂನ್ಯಗೊಳಿಸಿದಾಗ ಭಗವಂತನ ಕೈಸೇರುವ ಕೊಳಲು ನಾವಾಗುತ್ತೇವೆ; ಪರಿಶುದ್ಧವಾದ ಬೆಣ್ಣೆಯೂ ನಾವಾಗಬಹುದು. ಕೃಷ್ಣ ಸಂಸ್ಕೃತಿಯ ದ್ಯೋತಕ. ಸಂಸ್ಕೃತಿಯ ಬೆಳಕು ರಾಮ ಮತ್ತು ಕೃಷ್ಣರು. ಮಕ್ಕಳನ್ನು ಸಂಸ್ಕೃತಿಯ ಉಳಿವಿನ ಹರಿಕಾರರಾಗಿ ಬೆಳೆಸಬೇಕು. ಆ ಮೂಲಕ ಭವ್ಯ ಭಾರತ ನಿರ್ಮಾಣದ ಭವಿಷ್ಯ ಬರೆಯುವಂತಾಗಬೇಕು. ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಜೈ ಗುರುದೇವ ಕಲಾಕೇಂದ್ರ, ಒಡಿಯೂರು ಆಯೋಜಿಸಿದ್ದ ಮುದ್ದುಕೃಷ್ಣ ವೇಷ ಸ್ಪರ್ಧೆಯನ್ನು ಉದ್ಘಾಟಿಸಿ ಆಶೀರ್ವಚನಗೈದರು.
ಸಾಧ್ವಿ ಶ್ರೀ ಮಾತಾನಂದಮಯಿಯವರು ಉಪಸ್ಥಿತರಿದ್ದರು.  ಯಶವಂತ್ ವಿಟ್ಲ ಹಾಗೂ ಶ್ರೀ ಕಿರಣ್ ಆರ್ಟಿಸ್ಟ್ ತೀರ್ಪುಗಾರರಾಗಿ ಸಹಕರಿಸಿದರು. ಕಲಾಕೇಂದ್ರದ ಅಧ್ಯಕ್ಷ ಸುಬ್ರಹ್ಮಣ್ಯ ಒಡಿಯೂರು ಸ್ವಾಗತಿಸಿ, ಕಾರ್ಯದರ್ಶಿ  ಸುಖೇಶ್ ಭಂಡಾರಿ ವಂದಿಸಿದರು. ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಬಂಟ್ವಾಳ ಮೇಲ್ವಿಚಾರಕ  ಸದಾಶಿವ ಅಳಿಕೆ ಕಾರ್ಯಕ್ರಮ ನಿರೂಪಿಸಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...