ಒಡಿಯೂರು: ಮಾನವೀಯ ಮೌಲ್ಯ ತುಂಬಿರುವ ಪ್ರಜ್ಞಾವಂತ ಪ್ರಜೆ ನಿರ್ಮಾಣ ಮಾಡಬೇಕಾದರೆ ಶಿಕ್ಷಕರ ಜೊತೆ ಪೋಷಕರ ಪಾತ್ರ ಅತ್ಯಂತ ಮಹತ್ವದಾಗಿದೆ. ಇಂದಿನ ಜನಾಂಗವು ಆಧುನಿಕ ತಂತ್ರಜ್ಞಾನಕ್ಕೆ ಹೆಚ್ಚು ಮಾರು ಹೋಗುತ್ತಿರುವುದರಿಂದ ಬಾಂಧವ್ಯದ ಕೊರತೆಯಿದೆ. ಅದನ್ನು ಪೂರೈಸುವ ಕೆಲಸ ಹೆತ್ತವರಿಂದ ಆಗಬೇಕು. ಶಿಸ್ತು ಎನ್ನುವುದು ಶಿಕ್ಷೆಯಲ್ಲ ಅದೊಂದು ಶಿಕ್ಷಣವಾಗಿದೆ. ಇದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಬದುಕನ್ನು ಜೆನ್ನಾಗಿ ರೂಪಿಸಿಕೊಳ್ಳಲು ಸಾಧ್ಯ. ಭೌತಿಕ ಶಿಕ್ಷಣದ ಜೊತೆಗೆ ನೈತಿಕ ಶಿಕ್ಷಣವನ್ನು ಒದಗಿಸುವುದರಿಂದ ಸುಸಂಸ್ಕೃತ ಪ್ರಜೆಯನ್ನು ರೂಪಿಸಲು ಸಾಧ್ಯ ಎಂದು ಒಡಿಯೂರು ಶ್ರೀಗುರುದೇವದತ್ತಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮಿಗಳವರು ನುಡಿದರು.
ಅವರು ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ನಡೆದ ಶಿಕ್ಷಕ-ರಕ್ಷಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ಸಭೆಯಲ್ಲಿ ಶಾಲಾ ಸಂಚಾಲಕರಾದ ಸೇರಾಜೆ ಗಣಪತಿ ಭಟ್, ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಜಯಪ್ರಕಾಶ್ ಶೆಟ್ಟಿ ಎ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ರೇಣುಕಾ ಎಸ್. ರೈ, ಕ್ಷೇತ್ರದ ಕಾರ್ಯನಿರ್ವಾಹಕ ಪದ್ಮನಾಭ ಒಡಿಯೂರು ಉಪಸ್ಥಿತರಿದ್ದರು.
ಪೂರ್ವ ಪ್ರಾಥಮಿಕ ಪ್ರೌಢಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ಶಾಲಾ ಮಕ್ಕಳ ಪೋಷಕರು ಭಾಗವಹಿಸಿದರು. ಶಿಕ್ಷಕಿ ವೇದಾವತಿ ನಿರೂಪಿಸಿದರು.

