Tuesday, January 27, 2026

ಒಡಿಯೂರು ಶ್ರೀ ಸಂಸ್ಥಾನದಿಂದ ದಿನ ಬಳಕೆ ಸಾಮಾಗ್ರಿ ವಿತರಣೆ:

ವಿಟ್ಲ: ಕರೋನಾ (ಕೋವಿಡ್-19)ದ ಪರಿಣಾಮ ಲಾಕ್‍ಡೌನ್‍ನಿಂದಾಗಿ ತೊಂದರೆಗೀಡಾದ ಜನತೆಗೆ ಸ್ಪಂದಿಸಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಿಂದ ಪೂಜ್ಯ ಶ್ರೀ ಗುರುದೇವಾನಂದ ಸ್ವಾಮಿಗಳವರು ಕರೋಪಾಡಿ ಗ್ರಾಮದ ಸಾವಿರಕ್ಕೂ ಮಿಕ್ಕಿ ಮನೆಗಳಿಗೆ ಅಕ್ಕಿ, ಸಕ್ಕರೆ, ಚಾಹುಡಿ, ಸಾಂಬಾರು ಹುಡಿ ಇತ್ಯಾದಿ ದಿನ ಬಳಕೆಯ ವಸ್ತುಗಳನ್ನು ವಿತರಿಸಿದರು.

ಸಕಾಲದಲ್ಲಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ನಿರ್ದೇಶಕ ಕಿರಣ್ ಉರ್ವ, ಕರೋಪಾಡಿ ಗ್ರಾಮ ಸಮಿತಿಯ ಅಧ್ಯಕ್ಷ  ರಘುರಾಮ ಶೆಟ್ಟಿ ಪಟ್ಲಗುತ್ತು, ಬಂಟ್ವಾಳ ತಾಲೂಕು ವಿಸ್ತರಣಾಧಿಕಾರಿ ಸದಾಶಿವ ಅಳಿಕೆ, ಶ್ರೀ ಸುಬ್ರಾಯ ದೇವಸ್ಥಾನ, ವಗೆನಾಡು ಕ್ಷೇತ್ರ ನಿರ್ವಹಣಾ ಸಮಿತಿಯ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಅನೆಯಾಲಗುತ್ತು, ಶ್ರೀ ಸಂಸ್ಥಾನದ ಕಾರ್ಯನಿರ್ವಾಹಕ ಪದ್ಮನಾಭ ಒಡಿಯೂರು ಹಾಗೂ ಗ್ರಾಮ ಬಂಧುಗಳು ಮತ್ತು ಶ್ರೀ ಸಂಸ್ಥಾನದ ಕಾರ್ಯಕರ್ತರು ಸಹಕರಿಸಿದರು.

More from the blog

Bantwal : ರಥಸಪ್ತಮಿಯ ಪ್ರಯುಕ್ತ 108 ಸೂರ್ಯ ನಮಸ್ಕಾರ ಕಾರ್ಯಕ್ರಮ

ಬಂಟ್ವಾಳ : ಸಂಸ್ಕಾರ ಸಂಘಟನೆ ಸೇವೆಯ ಧ್ಯೇಯ ಉದ್ದೇಶಗಳನ್ನು ಹೊಂದಿರುವ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ( ರಿ) ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು, ಬಂಟ್ವಾಳ ತಾಲೂಕು ವತಿಯಿಂದ ಜ....

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...