Tuesday, January 27, 2026

ಒಡಿಯೂರಿನಲ್ಲಿ ಶ್ರೀ ದತ್ತ ಜಯಂತಿ ಮಹೋತ್ಸವ-ಶ್ರೀ ದತ್ತಮಹಾಯಾಗ ಸಪ್ತಾಹ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಡಿ.23 ರಿಂದ 29ರ ತನಕ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮಿಗಳವರ ಮಾರ್ಗದರ್ಶನದಲ್ಲಿ ವೇ|ಮೂ| ಕುರೋಮೂಲೆ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀ ದತ್ತ ಜಯಂತಿ ಮಹೋತ್ಸವ-ಶ್ರೀ ದತ್ತ ಮಹಾಯಾಗ ಸಪ್ತಾಹವು ನಾನಾ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು.
ಈ ಸಂದರ್ಭದಲ್ಲಿ ಶ್ರೀ ಗುರುದತ್ತಾತ್ರೇಯರ ಅವತಾರ ವಿಶೇಷ ಸಮರಸ ತತ್ತ್ವವನ್ನು ಜಗತ್ತಿಗೆ ಸಾರಿ, ವಿಶ್ವ ಮಾನವ ಧರ್ಮದ ಅರಿವು ಮೂಡಿಸುವುದೇ ಆಗಿದೆ. ಇಂತಹ ತತ್ತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದಕ್ಕೆ ಸಿದ್ಧರಿರುವ ಗುರುಭಜಕರಿಗೆ ’ಮಾಲಾಧಾರಣೆ’ (ವೃತಾಚರಣೆ) ಮಾಡುವುದಕ್ಕೆ ಸಪ್ತಾಹ ಪರ್ಯಂತ ಅವಕಾಶವನ್ನು ಕಲ್ಪಿಸಲಾಗಿದೆ.
ಡಿ.23 ರಂದು ಬುಧವಾರ ಬೆಳಗ್ಗೆ ದೀಪಾರಾಧನೆ, ಶ್ರೀಗಣಪತಿ ಹವನದೊಂದಿಗೆ ಶ್ರೀ ದತ್ತ ಮಹಾಯಾಗ ಸಪ್ತಾಹ ಆರಂಭ. ಪೂಜ್ಯ ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ದತ್ತಮಾಲಾಧಾರಣೆ. ಮಧ್ಯಾಹ್ನ ಮಹಾಪೂಜೆ, ಸಂಜೆ ಘಂಟೆ 7ರಿಂದ ಶ್ರೀ ದತ್ತಾಂಜನೇಯ ದೇವರ ಪಲ್ಲಕಿ ಉತ್ಸವ, ರಂಗಪೂಜೆ, ಬೆಳ್ಳಿ ರಥೋತ್ಸವ ನಡೆಯಲಿದೆ.
ಪ್ರತಿದಿನ ಬೆಳಿಗ್ಗೆ ಶ್ರೀ ಗುರುಚರಿತ್ರೆ ಪಾರಾಯಣ, ಮಧ್ಯಾಹ್ನ ಮಹಾಪೂಜೆ, ಮಹಾಸಂತರ್ಪಣೆ ಹಾಗೂ ರಾತ್ರಿ ರಂಗಪೂಜೆ, ಬೆಳ್ಳಿ ರಥೋತ್ಸವ ಸೇವೆ ನಡೆಯುವುವು.
ಡಿ.29 ರಂದು ಬೆಳಗ್ಗೆ ಸ್ವಯಂಭೂ ನಾಗಸನ್ನಿಧಿಯಲ್ಲಿ ನಾಗತಂಬಿಲ, ಬಳಿಕ ಪೂಜ್ಯ ಶ್ರೀಗಳವರಿಂದ ಅನುಗ್ರಹ ಸಂದೇಶ. ಮಧ್ಯಾಹ್ನ ಶ್ರೀ ದತ್ತ ಮಹಾಯಾಗ ಸಪ್ತಾಹದ ಪೂರ್ಣಾಹುತಿ, ಮಹಾಪೂಜೆ, ಮಹಾಸಂತರ್ಪಣೆ. ರಾತ್ರಿ ರಂಗಪೂಜೆ, ಮಹಾಪೂಜೆ, ಬೆಳ್ಳಿ ರಥೋತ್ಸವ ಸೇವೆ ಹಾಗೂ ಉಯ್ಯಾಲೆ ಸೇವೆಗಳು ನಡೆಯಲಿವೆ. ಈ ಎಲ್ಲಾ ಕಾರ್ಯಕ್ರಮಗಳನ್ನು ಸರಕಾರದ ಕೋವಿಡ್ 19ರ ನಿಯಮಗಳನ್ನು ಪಾಲಿಸಲಾಗುವುದು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...