Wednesday, June 25, 2025

’ಧರ್ಮ ಮತ್ತು ಸಂಸ್ಕೃತಿಗಳು ಒಂದನ್ನೊಂದು ಬಿಟ್ಟಿರದು’-ಒಡಿಯೂರು ಶ್ರೀ

ವಿಟ್ಲ: ಧರ್ಮ ಮತ್ತು ಸಂಸ್ಕೃತಿಗಳು ಒಂದನ್ನೊಂದು ಬಿಟ್ಟಿರುವುದಿಲ್ಲ. ಶ್ರದ್ಧಾ ಕೇಂದ್ರಗಳನ್ನು, ಮನೆಯ ಹಿರಿಯರನ್ನು ಕಡೆಗಣಿಸಿದಾಗ ಅನರ್ಥ ಸಂಭವಿಸುತ್ತದೆ. ಉತ್ತಮ ಮನಸ್ಸುಗಳು ಒಟ್ಟಾದಾಗ ಒಳ್ಳೆಯ ಕಾರ್‍ಯ ನಡೆಯುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ಹೇಳಿದರು.
ಅವರು ಪುಣಚ ಗ್ರಾಮದ ಬಡೆಕನಡ್ಕ ಎಂಬಲ್ಲಿ ರಕ್ತೇಶ್ವರಿ, ಪಂಜುರ್ಲಿ, ಗುಳಿಗ, ಭೈರವ ಸಾನ್ನಿಧ್ಯಗಳ ಜೀರ್ಣೋದ್ಧಾರ ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ ನೀಡಿದರು. ನಮ್ಮನ್ನು ಕಾಯುವ ಯೋಧರಲ್ಲಿ ಇನ್ನೂ ನೈತಿಕ ಸ್ಥೈರ್‍ಯ ಮೂಡುವಂತೆ ಸಾಮೂಹಿಕವಾಗಿ ಪ್ರಾರ್ಥಿಸೋಣ. ಯುವಕರು ಯಾವುದೇ ಕ್ಷೇತ್ರದಲ್ಲಿ ಕಾರ್‍ಯ ಮಾಡಿದರೂ ದೇಶಪ್ರೇಮಿಗಳಾಗಿರಬೇಕೆಂದು ಕರೆ ನೀಡಿದರು.
ದೈವಸ್ಥಾನ ಜೀಣೋದ್ಧಾರ ಕೈಂಕರ್‍ಯಕ್ಕೆ ಊರಪರವೂರಿನ ಬಂಧುಗಳ ಸಹಕಾರವಿರುತ್ತದೆ. ಸಂಘಟಿತರಾಗಿ ಕಾರ್‍ಯವನ್ನು ಪೂರ್ಣಗೊಳಿಸುವ ಉತ್ಸಾಹ ಬೇಕು ಎಂದು ಪುತ್ತೂರಿನ ಸ್ವರ್ಣೋದ್ಯಮಿ ಬಲರಾಮ ಆಚಾರ್‍ಯ ತಿಳಿಸಿದರು.
ಸಾಮೂಹಿಕವಾಗಿ ನಿರ್‍ಮಾಣವಾಗುವ ಸಾನ್ನಿಧ್ಯ ವಿಶೇಷ ಶಕ್ತಿಯಿಂದ ಕೂಡಿರುತ್ತದೆ. ಅಂತರಂಗ ನಿರ್ಮಲವಾಗಲು ಇಂತಹ ಕ್ಷೇತ್ರಗಳು ಕಾರಣವಾಗುತ್ತವೆ ಎಂದು ಹಿರಿಯ ಸಾಹಿತಿ ತಾಳ್ತಜೆ ವಸಂತ ಕುಮಾರ್ ಹೇಳಿದರು.
ಸಮಾರಂಭದಲ್ಲಿ ಭಾಗವಹಿಸಿದ ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲು, ಪುರೋಹಿತ ಶ್ರೀರಾಮ್ ಮುಗುಳಿ ಭಾಗವಹಿಸಿದ್ದರು.
ಜಯರಾಮ ಶಾಸ್ತ್ರಿ ಮಣಿಲ ಸ್ವಾಗತಿಸಿದರು. ಜೀಣೋಧ್ಧಾರ ಸಮಿತಿ ಅಧ್ಯಕ್ಷ ವಿಠಲ ಶಾಸ್ತ್ರಿ ಮಣಿಲ ಪ್ರಸ್ತಾವಿಸಿದರು. ಸಹ ಕಾರ್‍ಯದರ್ಶಿ ನಾರಾಯಣ ಮೂಲ್ಯ ಪಿ ವಂದಿಸಿದರು. ಪುಣಚ ದೇವಿ ನಗರ ಶ್ರೀದೇವಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಗಂಗಮ್ಮ ಕಾರ್‍ಯಕ್ರಮ ನಿರೂಪಿಸಿದರು.

 

More from the blog

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...

ರಾಜ್ಯ ಮಟ್ಟದ ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಣೆ

ಬಂಟ್ವಾಳ : ಕವಿ‌, ಸಾಹಿತಿ, ಸಂಘಟಕ ಯುವವಾಹಿನಿಯ ಸಲಹೆಗಾರ ಬಿ ತಮ್ಮಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ ಆಯೋಜಿಸಲಾತ್ತು. ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಹೊಸಪೇಟೆ , ವಿಜಯನಗರ, ಬೆಂಗಳೂರು, ಚಿತ್ರದುರ್ಗ,...