Friday, June 27, 2025

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್ ಬೇಟಿ ನೀಡಿ ಮಾಹಿತಿ ಪಡೆದುಕೊಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.

ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ರಸ್ತೆ ಸಹಿತ ಜಾಗಕ್ಕೆ ಕಬ್ಬಿಣದ ಬೇಲಿ ಹಾಕಿರುವ ಕ್ರಮದ ಬಗ್ಗೆ ಅಧಿಕಾರಿ ವರ್ಗವನ್ನು ಪ್ರಶ್ನಿಸಿದರು.

ಸರಕಾರಿ ಕಚೇರಿಗೆ ಸಂಬಂಧಿಸಿದಂತೆ ಮತ್ತು ಇತರ ಕಚೇರಿಗಳಿಗೆ ಬರುವ ಸಾರ್ವಜನಿಕರು ವಾಹನಗಳನ್ನು ಎಲ್ಲಿ ನಿಲ್ಲಿಸಬೇಕು, ಮತ್ತು ಅಂಬೇಡ್ಕರ್ ಭವನದಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಬರುವ ವಾಹನಗಳು ಎಲ್ಲಿ ಪಾರ್ಕ್ ಮಾಡಬೇಕು ಎಂದು ಅಧಿಕಾರಳಲ್ಲಿ ಶಾಸಕರು ಪ್ರಶ್ನಿಸಿದರು.

ಸರಕಾರದ ಇಲಾಖೆಯ ಸೇರಿದ ಜಾಗವನ್ನು ಸ್ವಂತ ಜಾಗದಂತೆ ಬೇಲಿ ಹಾಕಲು ನಿಮಗೆ ಅಧಿಕಾರ ನೀಡಿದವರು ಯಾರು ? ಎಂದು ಶಾಸಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ತಾ.ಪಂ.ಇಒ.ಸಚಿನ್ ಅವರು ರಜೆಯಲ್ಲಿ ಇದ್ದ ಕಾರಣಕ್ಕೆ ಪೋನ್ ಮೂಲಕ ಅವರನ್ನು ಸಂಪರ್ಕಿಸಿದಾಗ ಬೇಲಿ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಮುಖತಃ ಬೇಟಿಯಾಗಿ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

‌‌‌ಶಾಸಕರ ಜೊತೆ ಸ್ಥಳಕ್ಕೆ ಬಂದಿದ್ದ ಸಾರ್ವಜನಿಕರು ಬೇಲಿ ವಿಚಾರಕ್ಕೆ ಅಧಿಕಾರಿಗಳು ಆಡಿದ ಧರ್ಪದ ಮಾತುಗಳ ಬಗ್ಗೆ ಮಾಹಿತಿ ನೀಡಿದರು.

ಜಿ.ಪಂ.ಮಾಜಿ ಸದಸ್ಯ ತುಂಗಪ್ಪ ಬಂಗೇರ, ಪ್ರಮುಖರಾದ ಡೊಂಬಯ್ಯ ಅರಳ ಮತ್ತಿತರರು ಹಾಜರಿದ್ದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...