Tuesday, January 27, 2026

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ.

ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್ ಐ ಟಿ ಕೆ ಸಂಸ್ಥೆಯಿಂದ ಪ್ರೊಫೆಸರ್ ಡಾಕ್ಟರ್ ಪಲಿನಿ ಸ್ವಾಮಿ, ವಿಜಯನ್ ಅವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮಳೆಗಾಲವಾಗಿದ್ದರಿಂದ ಸೇತುವೆಯ ಫಿಲ್ಲರ್ ಹಾಗೂ ಹೆಚ್ಚಿನ ಪರಿಶೀಲನೆ ಅಸಾಧ್ಯ ಎಂದು ಹೇಳಿರುವ ಬಗ್ಗೆ ಸ್ಥಳೀಯ ಪುರಸಭಾ ಸದಸ್ಯ ಸಿದ್ದೀಕ್ ಅವರು ತಿಳಿಸಿದ್ದಾರೆ.

ಸೇತುವೆ ಪ್ರವೇಶದ ಆರಂಭಿಕ ಜಾಗದಲ್ಲಿ ಇಲಾಖೆಯ ವತಿಯಿಂದ ಸಣ್ಣಪುಟ್ಟ ಕಾಮಗಾರಿಗಳನ್ನು ನಡೆಸುವ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪಾಣೆಮಂಗಳೂರು ಹಳೆಯ ಬ್ರಿಟಿಷ್ ಕಾಲದ ಸೇತುವೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಅವರು ಅದೇಶ ಮಾಡಿದ್ದರು.

ಸಾಮರ್ಥ್ಯ ಪರೀಕ್ಷೆ ‌ನಡೆಸಿ ವರದಿ ನೀಡಿದ ಬಳಿಕ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಎಂದು ಅವರ ಅದೇಶದಲ್ಲಿ ಉಲ್ಲೇಖಿಸಲಾಗಿತ್ತು.

ಅದರೆ ಈ ಭಾಗದ ಜನರ ಒತ್ತಾಯದ ಮೇರೆಗೆ ಸ್ಥಳೀಯ ಪುರಸಭಾ ಸದಸ್ಯರ ಮನವಿಗೆ ಪುರಸಭೆಯ ಸಾಮಾನ್ಯ ಸಭೆಯಲ್ಲಿ ‌ನಿರ್ಣಯ ಮಾಡಿ ಯಥಾಸ್ಥಿತಿಯಲ್ಲಿ ಇರುವಂತೆ ಕೋರಲಾಗಿತ್ತು.ಇದೀಗ ವಾಹನಗಳು ನಿರ್ಬಂಧವಿಲ್ಲದೆ ಓಡಾಟ ನಡೆಸುತ್ತಿವೆ.

ಈ ನಡುವೆ ಸ್ಥಳೀಯ ಪುರಸಭಾ ಸದಸ್ಯರು ಹಾಗೂ ಸಾರ್ವಜನಿಕರು ಜಿಲ್ಲಾ ಉಸ್ತುವಾರಿ ಸಚಿವರನ್ನು ಬೇಟಿ ಮಾಡಿ ಸಂಚಾರ ನಿರ್ಬಂಧ ‌ಮಾಡದಂತೆ ಮನವಿಯನ್ನು ‌ಮಾಡಿದ್ದರು.

ಇದರ ಮುಂದುವರಿದ ಭಾಗವಾಗಿ ಇಂದು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಮೇರೆಗೆ ಎನ್.ಐ.ಟಿ.ಕೆ.ಅಧಿಕಾರಿಗಳು ಬೇಟಿ ನೀಡಿದ್ದಾರೆ.

ಪರಿಶೀಲಿಸಿ ಕ್ರಮ ಕೈಗೊಳ್ಳಿ: ಪುರಸಭಾ ಸದಸ್ಯ ಸಿದ್ದೀಕ್

ಸೇತುವೆ ಯಾವುದೇ ಬಿರುಕು ಬಿಟ್ಟಿಲ್ಲ, ಅಧಿಕಾರಿಗಳ ಅದೇಶ ಸಮಂಜಸವಲ್ಲ, ಸಾಮರ್ಥ್ಯ ವರದಿ ಬರುವ ಮುನ್ನ ಸೇತುವೆಯ ನಿರ್ಬಂಧ ಒಪ್ಪುವಂತದ್ದಲ್ಲ. ಪಾಣೆಮಂಗಳೂರು ಭಾಗದ ಈ ಪಿ.ಡಬ್ಯ್ಲೂ ರಸ್ತೆ ಬ್ರಿಟಿಷ್ ಕಾಲದ ಹಳೆಯ ಸೇತುವೆ ಇದಾಗಿದ್ದು, ಇತರ ಗ್ರಾಮಗಳ ಸಂಪರ್ಕಕ್ಕೆ ತಡೆಯಾಗುತ್ತದೆ. ಇದರ ಬಗ್ಗೆ ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಅವರು ತಿಳಿಸಿದ್ದಾರೆ.

ಗೌಪ್ಯವಾಗಿ ಪರಿಶೀಲನೆ :

ಪಾಣೆಮಂಗಳೂರು ಸೇತುವೆ ಪರಿಶೀಲನೆ ಮಾಡಲು ಅಧಿಕಾರಿಗಳು ಬರುವ ಬಗ್ಗೆ ಪುರಸಭೆ ‌ಮಾಹಿತಿಯನ್ನು ಮಾಧ್ಯಮವರಿಗೆ ನೀಡದೆ ಗೌಪ್ಯವಾಗಿಟ್ಟಿತ್ತು.

Two officials from Mangalore NITK arrived to conduct a strength test of the British-era Pane Mangalore Bridge and submitted a report to the District Collector.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...