ನವದೆಹಲಿ: ರಾಜ್ಯದಲ್ಲಿ ಬಾಕಿ ಇರುವ 21 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಸಭೆ ಒಟ್ಟು 17 ಕ್ಷೇತ್ರಗಳಿಗೆ ಟಿಕೆಟ್ ಅಂತಿಮಗೊಳಿಸಿದೆ. ಈ ಪೈಕಿ ಬಹುತೇಕ ಹೊಸ ಮುಖಗಳಾಗಿವೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಕೆಸಿ ವೇಣುಗೋಪಾಲ್, ಅಂಬಿಕಾ ಸೋನಿ, ಸಲ್ಮಾನ್ ಖುರ್ಷಿದ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದ ಸಿಇಸಿ ಸಭೆಯಲ್ಲಿ ಒಟ್ಟು 17 ಕ್ಷೇತ್ರಗಳ ಟಿಕೆಟ್ ಅಂತಿಮಗೊಳಿಸಲಾಗಿದೆ.
ಸಿಇಸಿ ಅಂತಿಮಗೊಳಿಸಿರುವ ಸಂಭವನೀಯ ಅಭ್ಯರ್ಥಿಗಳು ವಿವರ
ದಕ್ಷಿಣ ಕನ್ನಡ – ಪದ್ಮರಾಜ್ ರಾಮಯ್ಯ
ಉಡುಪಿ- ಚಿಕ್ಕಮಗಳೂರು: ಜಯಪ್ರಕಾಶ್ ಹೆಗ್ಡೆ
ಬೆಂಗಳೂರು ದಕ್ಷಿಣ: ಸೌಮ್ಯಾ ರೆಡ್ಡಿ
ಚಿಕ್ಕಬಳ್ಳಾಪುರ: ರಕ್ಷಾ ರಾಮಯ್ಯ
ಬೆಂಗಳೂರು ಕೇಂದ್ರ: ನಜೀರ್ ಅಹ್ಮದ್ ಮನ್ಸೂರ್ ಅಲಿಖಾನ್
ಕೋಲಾರ: ಡಾ| ಎಲ್. ಹನುಮಂತಯ್ಯ
ಕಲಬುರಗಿ: ರಾಧಾಕೃಷ್ಣ ದೊಡ್ಡಮನಿ
ಬೀದರ್: ರಾಜಶೇಖರ ಪಾಟೀಲ್ ಹುಮ್ನಾಬಾದ್
ರಾಯಚೂರು: ಕುಮಾರ ನಾಯಕ್
ಕೊಪ್ಪಳ: ರಾಜಶೇಖರ ಹಿಟ್ನಾಳ್
ಚಿತ್ರದುರ್ಗ: ಬಿ.ಎನ್. ಚಂದ್ರಪ್ಪ
ದಾವಣಗೆರೆ: ಡಾ| ಪ್ರಭಾ ಮಲ್ಲಿಕಾರ್ಜುನ
ಚಾಮರಾಜನಗರ: ಸುನಿಲ್ ಬೋಸ್
ಬಾಗಲಕೋಟೆ: ಸಂಯುಕ್ತ ಶಿವಾನಂದ ಪಾಟೀಲ್/ಅಜಯಕುಮಾರ ಸರನಾಯಕ್
ಬೆಳಗಾವಿ: ಮೃಣಾಲ್ ಹೆಬ್ಬಾಳ್ಕರ್
ಚಿಕ್ಕೋಡಿ: ಪ್ರಿಯಾಂಕಾ ಜಾರಕಿಹೊಳಿ
ಮೈಸೂರು: ಎಂ. ಲಕ್ಷ್ಮಣ
ಇನ್ನುಳಿದ ಬೆಂಗಳೂರು ಉತ್ತರ, ಉತ್ತರ ಕನ್ನಡ, ಹುಬ್ಬಳ್ಳಿ-ಧಾರವಾಡ, ಬಳ್ಳಾರಿ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಲಾಗಿಲ್ಲ ಎಂದು ತಿಳಿದುಬಂದಿದೆ.