Friday, January 30, 2026

ಧರ್ಮಸ್ಥಳದಲ್ಲಿ ತುಲಾಭಾರ ಸೇವೆಗೆ ಆನ್‌ಲೈನ್ ಮೂಲಕ ಮುಂಗಡಕಾದಿರಿಸುವ ಸೌಲಭ್ಯ

ಉಜಿರೆ: ಧರ್ಮಸ್ಥಳದಲ್ಲಿ ತುಲಾಭಾರ ಸೇವೆಗೆ ಆನ್‌ಲೈನ್ ಮೂಲಕ ಮುಂಗಡಕಾದಿರಿಸುವ ಸೌಲಭ್ಯಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಚಾಲನೆ ನೀಡಿದರು.
ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರಕುಮಾರ್, ಸುಪ್ರಿಯಾ ಹರ್ಷೇಂದ್ರಕುಮಾರ್ ಮತ್ತು ಪೂರಣ್‌ವರ್ಮ ಉಪಸ್ಥಿತರಿದ್ದರು.
ವೆಬ್‌ಸೈಟ್: www.shridharmasthala.org. ಭಕ್ತಾದಿಗಳು ಈ ವೆಬ್‌ಸೈಟ್ ಮೂಲಕ ತುಲಾಭಾರ ಸೇವೆಯ ದಿನಾಂಕ ಹಾಗೂ ಇತರ ವಿವರಗಳನ್ನು ಭರ್ತಿ ಮಾಡಿ ಆನ್‌ಲೈನ್ ಮೂಲಕವೇ ಸೇವೆಯ ಹಣ ಪಾವತಿಸಬಹುದು. ಸೇವೆಯ ದಿನಾಂಕ ಕಾದಿರಿಸಿದ ಬಳಿಕ ಈ ಬಗ್ಗೆ ಖಚಿತ ಸಂದೇಶರವಾನಿಸಲಾಗುತ್ತದೆ. ಧರ್ಮಸ್ಥಳಕ್ಕೆ ಬಂದಾಗ ಸಂದೇಶದ ವಿವರ ತಿಳಿಸಿ ತುಲಾಭಾರ ಸೇವೆ ಮಾಡಬಹುದು.
ತುಲಾಭಾರ ಸೇವೆಗೆ ಆನ್‌ಲೈನ್‌ ಕಾದಿರಿಸುವ ಸೌಲಭ್ಯವನ್ನು ಡಿ. ಶ್ರೇಯಸ್‌ಕುಮಾರ್ ಮತ್ತು ನಿಶ್ಚಲ್‌ಕುಮಾರ್ ಡಿ. ಮಾರ್ಗದರ್ಶನದಲ್ಲಿ ಬೆಂಗಳೂರಿನ ವೈರ್‌ಕ್ಯಾಂಪ್‌ ಸಂಸ್ಥೆಯವರು ರೂಪಿಸಿದ್ದಾರೆ.

More from the blog

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...

ಫೆ.3ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಹಿಳಾ & ಮಕ್ಕಳ ಸಂಭ್ರಮೋತ್ಸವ

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಫೆ.3ರಂದು ಮಂಗಳವಾರ...