Wednesday, July 9, 2025

ಇರ್ವತ್ತೂರುಪದವು : ಶ್ರೀ ಶಾರದಾ ಪೂಜೆ  ಪ್ರಶಸ್ತಿ ಪ್ರದಾನ, ಸಾಧಕರಿಗೆ ಸಮ್ಮಾನ

ಬಂಟ್ವಾಳ: ಬಂಟ್ವಾಳ ತಾ| ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸಮಿತಿ ಇದರ ಆಶ್ರಯದಲ್ಲಿ ಮೂಡುಪಡುಕೋಡಿ ಸ.ಹಿ.ಪ್ರಾ. ಶಾಲಾ ವಠಾರದಲ್ಲಿ  5 ನೇ ವರ್ಷದ ಶ್ರೀ ಶಾರದಾ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಶಾರದಾ ಎಸ್ ರಾವ್ ಮಂಚಿ ಅವರಿಗೆ ಶಾರದಾ ತಿಲಕ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ನಡೆಯಿತು.

ತಾಲೂಕು ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಸುನಿಲ್ ಸಿಕ್ವೆರಾ, ಮುರಳಿಕೃಷ್ಣ ರಾವ್, ನಿವೃತ್ತ ಶಿಕ್ಷಕಿ ವಸಂತಿ ಜಿ.ಕೆ.ಭಟ್, ಶಿಕ್ಷಕರಾದ ವಿಲ್ಮಾ ಮೇರಿ ಡಿಸೋಜ,ಅಮೃತಾ ಕೆ., ಕುಮಾರ್‌ಸಿ.,ಬಂಟ್ವಾಳ ತಾ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಅವರನ್ನು ಸನ್ಮಾನಿಸಲಾಯಿತು.

ಕಜೆಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಧ್ಯಕ್ಷ ಚಂದ್ರಶೇಖರ ಭಟ್ ನೆಕ್ಕಿತರವು,ಸಮಿತಿ ಕಾರ್ಯಾಧ್ಯಕ್ಷ ಹರೀಂದ್ರ ಪೈ, ಸಮಿತಿ ಗೌರವಾಧ್ಯಕ್ಷ ರಾಜೀವ ಶೆಟ್ಟಿ ಎಡ್ತೂರು, ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ಲೋಕೇಶ್ ಆಚಾರ್ಯ, ಜಗನ್ನಾಥ ಶೆಟ್ಟಿ ಕೆದ್ದಳಿಕೆ, ಧೀರಜ್ ನಾಯ್ಕ್ ಪ್ರಶಾಂತ್ ಪುಂಜಾಲಕಟ್ಟೆ, ರಮೇಶ್ ಪೂಜಾರಿ ಕುಡ್ಮೇರು,ಸತೀಶ್ ಕಯ್ಯಬೆ, ಯತೀಶ್ ಶೆಟ್ಟಿ, ಶೇಖರ ಪೂಜಾರಿ, ಪದ್ಮನಾಭ ಭಂಡಾರಿ, ಮೋಹನ ಶೆಟ್ಟಿ ನರ್ವಲ್ದಡ್ಡ,  ಸಮಿತಿ ಪದಾಽಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಶಂಕರ ಶೆಟ್ಟಿ ಬೆದ್ರಮಾರ್ ಸ್ವಾಗತಿಸಿದರು. ಸಮಿತಿ ಅಧ್ಯಕ್ಷ ಡಾ| ರಾಮಕೃಷ್ಣ ಎಸ್. ಪ್ರಸ್ತಾವಿಸಿದರು.ದಯಾನಂದ ಎರ್ಮೆನಾಡು ವಂದಿಸಿದರು.ಗಣೇಶ್ ಶೆಟ್ಟಿ ಸೇವಾ ಕಾರ್ಯಕ್ರಮ ನಿರೂಪಿಸಿದರು.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...