Monday, July 7, 2025

ಶೀಘ್ರದಲ್ಲೇ ಬಂಟ್ವಾಳದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆ

ಬಂಟ್ವಾಳ: ವಾರದೊಳಗೆ ಬಂಟ್ವಾಳ ಆಸ್ಪತ್ರೆಯ ಆವರಣದಲ್ಲಿ ಬೃಹತ್ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆ ಯಾಗಲಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಲಸಿಕಾ ಅಭಿಯಾನಕ್ಕೆ ಪುಟಾಣಿ ಹೃತಿಕ ಜೊತೆ ಚಾಲನೆ ನೀಡಿ ಮಾತನಾಡಿದರು. ಲಸಿಕೆ ಅಭಿಯಾನದ ಮೂಲಕ ಲಸಿಕೆ ನೀಡುವಿಕೆಗೆ ಮತ್ತಷ್ಟು ವೇಗ ದೊರಕಿದೆ ಜಿಲ್ಲೆಯಾದ್ಯಂತ ಲಸಿಕೆ ಅಭಿಯಾನ ನಡೆಯುತ್ತಿದ್ದು ಆದ್ಯತೆಯ ಮೇಲೆ ಪ್ರತಿಯೊಬ್ಬರಿಗೂ ಲಸಿಕೆ ನೀಡಲಾಗುವುದು.

ಬಂಟ್ವಾಳಕ್ಕೆ ಒಟ್ಟು ಹತ್ತು ಸಾವಿರದ ಐನೂರಕ್ಕೂ ಅಧಿಕ ಲಸಿಕೆ ಪೂರೈಕೆ ಆಗಿದ್ದು ಎಲ್ಲಾ ಆರೋಗ್ಯ ಕೇಂದ್ರ ಮೂಲಕ ಜನರಿಗೆ ಲಸಿಕೆ ನೀಡುವ ಕಾರ್ಯ ನಡೆಯುತ್ತಿದೆ. ಪ್ರಂಟ್ ಲೈನ್ ವರ್ಕರ್ಸ್ ಗಳಿಗೆ ಲಸಿಕೆ ಮೊದಲ ಆದ್ಯತೆ ಯಲ್ಲಿ ನೀಡಲಾಗುತ್ತಿದ್ದು ಅವರ ಕುಟುಂಬ ಗಳಿಗೂ ಲಸಿಕೆ ಅಭಿಯಾನ ನಡೆಯುತ್ತಿದೆ.

ಇದೇ ಸಂದರ್ಭದಲ್ಲಿ ಹತ್ತು ಪ್ರಾಣವಾಯು ಯಂತ್ರ ವನ್ನು ಆಸ್ಪತ್ರೆಗೆ ಶಾಸಕರು ಹಸ್ತಾಂತರ ಮಾಡಿದರು. ಬಳಿಕ ಸರಕಾರಿ ಆಸ್ಪತ್ರೆಯ ಅವರಣದಲ್ಲಿ ನಿರ್ಮಾಣವಾಗುತ್ತಿರುವ ಆಕ್ಸಿಜನ್ ಉತ್ಪಾದನಾ ಘಟಕ ಕಾಮಗಾರಿ ಯನ್ನು ವೀಕ್ಷಕಣೆ ನಡೆಸಿದ ರು. ಆಕ್ಸಿಜನ್ ಸಿಲಿಂಡರ್ ಜೋಡಣೆ ಕಾರ್ಯ ಪೂರ್ಣಗೊಂಡಿದ್ದು ವ್ಯವಸ್ಥೆ ಯನ್ನು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ , ಬಿಜೆಪಿ ವಾರ್ ರೂಮ್ ಪ್ರಮುಖರಾದ ಪ್ರಕಾಶ್ ಅಂಚನ್, ಪುರುಷೋತ್ತಮ ಶೆಟ್ಟಿ ವಾಮದಪದವು, ನಂದರಾಮ ರೈ, ಕೇಶವ ದೈಪಲ, ಮಹೇಶ್ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಡಾ| ದೀಪಾ ಪ್ರಭು, ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ|ಪುಷ್ಪಲತಾ , ಡಾ| ಕಿಶೋರ್, ಡಾ| ವೇಣುಗೋಪಾಲ ,ಡಾ| ಚೇತನ್, ಡಾ| ಸಂದೀಪ್ ಎ.ಎಸ್.ಸಂದೀಪ್ ಕುಡ್ವ , ಡಾ|ಪಾವನ ಮತ್ತಿತರರು ಉಪಸ್ಥಿತರಿದ್ದರು.

More from the blog

ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಕ್ರಮ..

ಬಂಟ್ವಾಳ : ವ್ಯಸನಗಳು ವ್ಯಕ್ತಿಯ ಆರೋಗ್ಯ ಕುಟುಂಬ ಮತ್ತು ಸಮಾಜದ ಮೇಲೆ ಪ್ರಭಾವವನ್ನು ಬೀರುತ್ತವೆ, ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ಹಾಳು ಮಾಡಿ ಆರ್ಥಿಕ ನಷ್ಟವನ್ನು ಉಂಟು ಮಾಡುವುದಲ್ಲದೆ ಕುಟುಂಬದಲ್ಲಿ ಕಲಹ ಮಾನಸಿಕ...

ಏಮಾಜೆ ಶಾಲೆ : ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ..

ಬಂಟ್ವಾಳ : ಶಾಲಾ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮಹತ್ವದ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ. ಸರಕಾರಿ ಕಿ. ಪ್ರಾ ಶಾಲೆ ಏಮಾಜೆಯಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ...

ಬೆಂಜನಪದವು ಪ್ರೌಢಶಾಲೆ : ಶಾಲಾ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ..

ಬಂಟ್ವಾಳ: ಇಂದು ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ ನಡೆಯಿತು. ಶಾಲಾ ಸಂಸತ್ತಿನ ಮುಖ್ಯ ಮಂತ್ರಿ ಸೇರಿದಂತೆ ವಿವಿಧ ಇಲಾಖೆಗಳ ಮಂತ್ರಿಗಳಿಗೆ ರಾಜ್ಯಪಾಲರು ಪ್ರಮಾಣ...

ಮುಂದುವರಿದ ಮಳೆ ಅಬ್ಬರ : ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ..

ಬಂಟ್ವಾಳ : ಶನಿವಾರವೂ ಮಳೆಗೆ ತಾಲೂಕಿನ ಅಲ್ಲಲ್ಲಿ ಹಾನಿಯಾಗಿದ್ದು, ಕಡೇಶ್ವಾಲ್ಯ ಗ್ರಾಮದ ನಡ್ಯೇಲು ಎಂಬಲ್ಲಿ ಕಾಲುಸಂಕ ಮುರಿದು ಬಿದ್ದಿರುತ್ತದೆ. ಇಲ್ಲಿನ ಗ್ರಾಮಪಂಚಾಯತ್ ಪೂರ್ವದಲ್ಲಿಯೇ ಎಚ್ಚರಿಕೆ ಫಲಕ ಅಳವಡಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿರುವುದಿಲ್ಲ. ತೋಡಿನಲ್ಲಿ...