Thursday, July 3, 2025

ಪೆರಾಜೆ ಗ್ರಾ.ಪಂ. ಕೋವಿಡ್ ಟಾಸ್ಕ್ ಫೋರ್ಸ್ ಸಭೆ

ಬಂಟ್ವಾಳ: ಪೆರಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪತ್ತೆಯಾದ ಎರಡು ಸಕ್ರೀಯ ಕೊರೋನಾ ಪ್ರಕರಣಗಳು ಗುಣಮುಖರಾಗುವ ಹಂತದಲ್ಲಿದ್ದಾರೆ. ಇದು ಉತ್ತಮ ಅಂಶವಾಗಿದ್ದು ಮುಂದೆಯೂ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕೆಂದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ಅವರು ಪೆರಾಜೆ ಗ್ರಾಮ ಪಂಚಾಯತ್ ನಲ್ಲಿ ಗುರುವಾರ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದರು.

ಟಾಸ್ಕ್ ಫೋರ್ಸ್ ಸಮಿತಿ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕರು, ಹೊರ ಜಿಲ್ಲೆಗಳಿಂದ ಬಂದವರ ಆರೋಗ್ಯ ಹಾಗೂ ಚಲನವಲನಗಳ ಬಗ್ಗೆ ಹೆಚ್ಚಿನ ಗಮನಹರಿಸುವಂತೆ ಸೂಚಿಸಿದರು.

ಬಂಟ್ವಾಳ ತಹಶಿಲ್ದಾರ್ ರಶ್ಮಿ ಎಸ್.ಆರ್. ಮಾಹಿತಿ ನೀಡಿ, ಲಸಿಕೆ ಪಡೆದುಕೊಳ್ಳುವವರು ಮುಂಚಿತವಾಗಿ ನೋಂದಣಿ ‌ಮಾಡಿಕೊಳ್ಳಬೇಕು‌. ಕೊರತೆ ವಿಚಾರದಲ್ಲಿ ಆತಂಕ ಬೇಡ. ಹಂತಹಂತವಾಗಿ ಎಲ್ಲರಿಗೂ ಲಸಿಕೆ‌ ಸಿಗುತ್ತದೆ ಎಂದರು.

ತಾ.ಪಂ. ಇ.ಒ. ರಾಜಣ್ಣ ಮಾತನಾಡಿ, ಕೋವಿಡ್ ನಿಯಮ ಹಾಗೂ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ದ ಟಾಸ್ಕ್ ಫೋರ್ಸ್ ಸಮಿತಿ ಅಥವಾ ಪೊಲೀಸ್ ಇಲಾಖೆಯ ಮೂಲಕ ಕ್ರಮ ಕೈಗೊಳ್ಳಬೇಕು‌. ವಾರಕ್ಕೊಮ್ಮೆ ಟಾಸ್ಕ್ ಫೋರ್ಸ್ ಸಭೆ ಮಾಡುವ ಮೂಲಕ ಗ್ರಾಮಪಂಚಾಯತ್ ಮಟ್ಟದ ಪ್ರಗತಿ ಪರಿಶೀಲನೆ ಮಾಡಿಕೊಳ್ಳಬೇಕುಎಂದು ಸಲಹೆ‌ ನೀಡಿದರು.

ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಶಿಕಲಾ ಮಾತನಾಡಿ, ಗ್ರಾಮಸ್ಥರಲ್ಲಿ ಕೊರೋನಾ ಗೆ ಸಂಬಂಧಿಸಿದ ಲಕ್ಷಣಗಳು ಕಾಣಿಸಿಕೊಂಡಲ್ಲಿ, ತಕ್ಷಣವೇ ಕೊರೋನಾ ತಪಾಸಣೆ ಮಾಡಿಕೊಳ್ಳಬೇಕು, ಯಾವುದೇ ಭಯ ಬೇಡ. ಉಲ್ಭಣಗೊಂಡ ಬಳಿಕ ಚಿಕಿತ್ಸೆ ಕಷ್ಟಕರವಾಗುತ್ತದೆ ಎಂದರು.

ಪೆರಾಜೆ ಗ್ರಾ.ಪಂ. ಅಧ್ಯಕ್ಷೆ ರೋಹಿಣಿ, ಉಪಾಧ್ಯಕ್ಷ ಉಮ್ಮರ್, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್., ತಾ.ಪಂ. ಇ.ಒ. ರಾಜಣ್ಣ, ಪಿ.ಡಿ.ಒ. ಶಂಭುಕುಮಾರ ಶರ್ಮ, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಗ್ರಾಮ ಕರಣಿಕೆ ಸುರಕ್ಷಾ, ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಶಶಿಕಲಾ, ಶಾಸಕರ ವಾರ್ ರೂಂ ಪ್ರಮುಖರಾದ ದೇವಪ್ಪ ಪೂಜಾರಿ, ಯಶವಂತ ನಾಯ್ಕ್ ,
ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

More from the blog

Mangalore : ಹಬ್ಬಗಳ ಋತು ಆರಂಭ – ಆಚರಣೆಗೆ ಷರತ್ತು ವಿಧಿಸಿದ ಪೊಲೀಸ್ ಇಲಾಖೆ..

ಮಂಗಳೂರು : ಕೆಲವೇ ದಿನಗಳಲ್ಲಿ ಹಬ್ಬಗಳ ಋತು ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು ನಡೆಯಲಿದೆ. ಅವುಗಳಲ್ಲಿ ಮುಹರ್ರಂ, ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ,...

ಶ್ರೀ. ಕ್ಷೇ. ಧ. ಗ್ರಾ. ಯೋಜನೆಯ ಕ್ರಿಟಿಕಲ್ ಫಂಡ್ ಸಹಾಯಧನ ವಿತರಣೆ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸುಧೆಕಾರು ಲೀಲಾ ಕೃಷ್ಣಪ್ಪ ಇವರ ಮಗನಾಧ ಹರೀಶ್ ಇವರು ಅನಾರೋಗ್ಯದಿಂದ ಬಳಲುತ್ತಿದ್ದು. ಇವರ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕ್ರಿಟಿಕಲ್ ಫಂಡ್...

ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಕಾನೂನು ವಿರೋಧಿ ಕ್ರಮ ಖಂಡಿಸಿ ಪ್ರತಿಭಟನೆಗೆ ಕರೆ 

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ 2 ತಿಂಗಳುಗಳಿಂದ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆಯು ಕಾನೂನು ವಿರೋಧಿ ಕ್ರಮಗಳನ್ನು ಜಾರಿಗೊಳಿಸುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ...

ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲಿನ ಹಲ್ಲೆ ಪ್ರಕರಣ : ಆರೋಪಿ ಬಂಧನ..

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವೆನೆ ಮಾಡುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೋಲೀಸ್ ಸಿಬ್ಬಂದಿ ಮೇಲೆ ಅರೋಪಿಯೋರ್ವ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ...