Monday, February 2, 2026

ಮಂಗಳೂರು ಪೊಲೀಸ್ ಸಿಬ್ಬಂದಿ ಕೊರೋ‌ನ ಸೋಂಕಿಗೆ ಬಲಿ

ಮಂಗಳೂರು: ಎರಡೂ ಲಸಿಕೆ ಪಡೆದಿದ್ದ ಮಾಜಿ ಸೈನಿಕರೂ ಆಗಿರುವ, ಮಂಗಳೂರಿನ ಪೊಲೀಸ್ ಸಿಬ್ಬಂದಿ ಕೊರೊನಾ ಮಹಾ ಮಾರಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಮೂಲತಃ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿವಾಸಿಯಾದ ಸಿದ್ದಪ್ಪ ಶಿಂಗೆ ಎಂಬವರು ಕೊರೋನ ಸೋಂಕಿನಿಂದ ಮೃತಪಟ್ಟ ಪೊಲೀಸ್ ಸಿಬ್ಬಂದಿ.

ಮಂಗಳೂರು ಮೀಸಲು ಪೊಲೀಸ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ದಪ್ಪ ಶಿಂಗೆ ಅವರಿಗೆ ಕೊರೋನ ಸೋಂಕು ದೃಢಪಟ್ಟಿತ್ತು. ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮಾಜಿ ಸೈನಿಕರು ಆಗಿದ್ದ ಅವರು ಕೋವಿಡ್ ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದ್ದ ಇವರು ಕಳೆದ ಎರಡು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.

More from the blog

Panemangaluru : ಸ್ಕೂಟರ್ ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ...

ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ

ವಿಟ್ಲ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಯಕ್ಷಕಲಾ ಪ್ರತಿಷ್ಠಾನ ಪುಣಚ ಇವರಿಂದ ಮಾಸಿಕ 'ರಾವಣ ವಧೆ' ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್. ಚೆಂಡೆ ಮದ್ದಳೆಯಲ್ಲಿ ಡಾ. ಶ್ರೀ ಪ್ರಕಾಶ್ ಬಂಗಾರಡ್ಕ...

ವಿಕಸಿತ ಭಾರತಕ್ಕೆ ಭದ್ರ ತಳಹದಿ : ನಳಿನ್‌ ಕುಮಾರ್ ಕಟೀಲ್

ಮಂಗಳೂರು : ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸಲು ಈ ಬಜೆಟ್ ಭದ್ರ ತಳಹದಿಯಾಗಿದೆ. ಕೃಷಿ, ಶಿಕ್ಷಣ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ ಸಹಿತ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ, ದೇಶದ...

ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್ : ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ...