Monday, January 26, 2026

ಜು.3 : ಲೊರೆಟ್ಡೊ ರೋಟರಿ ಹಿಲ್ಸ್ ನೂತನ ಪದಾಧಿಕಾರಿಗಳ ಪದಗ್ರಹಣ

ಬಂಟ್ವಾಳ: ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್ ನ 2019-20 ರ ಸಾಲಿನ ನೂತನ ಅಧ್ಯಕ್ಷ ಪದ್ಮರಾಜ್ ಬಲ್ಲಾಳ್ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು.3ರಂದು (ಇಂದು) ಸಂಜೆ ಲೊರೆಟ್ಟೊ, ಗ್ರೀನ್ ಸಿಟಿ ರೋಟರಿ ಸಭಾಭವನದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ರೋ.ಪಿಎಚ್ ಎಫ್ ಅವಿಲ್ ಮೆನೇಜಸ್ ತಿಳಿಸಿದ್ದಾರೆ. ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಲಯ-4 ರ  ಸಹಾಯಕ ರಾಜ್ಯಪಾಲ ಮೇಜರ್ ಡೋನರ್ ರಿತೇಶ್ ಬಾಳಿಗಾ, ಹಾಲಿ ಸಹಾಯಕ ರಾಜ್ಯಪಾಲ ಪ್ರಕಾಶ್ ಕಾರಂತ, ರೋ.ಸಂಜೀವ ಪೂಜಾರಿ ಅವರು ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಈ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ    ಅತೀ ಹೆಚ್ಚು ಅಂಕಗಳಿಸಿದ ತಾಲೂಕಿನ ಮೂರು ಸರಕಾರಿ ಶಾಲೆಯ ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕ ನಾರಾಯಣ ನಾಯ್ಕ್ ಕರ್ಪೆ ಅವರನ್ನು ಸನ್ಮಾನಿಸಲಾಗುವುದು, ಕ್ಲಬ್ ಅಸ್ತಿತ್ವಕ್ಕೆ ಬಂದ ಮೊದಲ ವರ್ಷದಲ್ಲಿ ಕ್ಲಬ್ ಗೆ ಸಭಾಭವನದ ನಿರ್ಮಾಣ, ಬಡ ಕುಟುಂಬವೊಂದಕ್ಕೆ ಸೋಲಾರ್ ವ್ಯವಸ್ಥೆ, ಸರಕಾರಿ ಶಾಲೆಯೊಂದಕ್ಕೆ ಪೈಂಟ್ ಬಳಿಯಲಾಗಿದೆ ಹಲವಾರು ಕಾರ್ಯಕ್ರಮಗಳನ್ನು ಮಾಡಲಾಗಿದೆ ಎಂದು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ನಿಯೋಜಿತ ಅಧ್ಯಕ್ಷ ಪದ್ಮರಾಜ್ ಬಲ್ಲಾಳ್, ನಿಯೋಜಿತ ಕಾರ್ಯದರ್ಶಿ ಮೇರಿ ಶೃತಿ ಮಾಡ್ತ, ಹಾಲಿ ಕಾರ್ಯದರ್ಶಿ ರಾಮಚಂದ್ರ ಶೆಟ್ಟಿಗಾರ್, ರೋ.ಪ್ರಭಾಕರ ಪ್ರಭು ಉಪಸ್ಥಿತರಿದ್ದರು.

More from the blog

ಅಮ್ಮುoಜೆ : ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ..

ಬಂಟ್ವಾಳ : ಅಮ್ಮುoಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೊತ್ಸವವು ವಿಜೃಂಭಣೆಯಿಂದ ನಡೆಯಿತು. ಜ.25ರಂದು ಭಾನುವಾರ ಬಲಿ ಉತ್ಸವ ನಡೆಯಿತು. ಶ್ರೀಕ್ಷೇತ್ರ ಪೊಳಲಿಯ ಸುಬ್ರಮಣ್ಯ ತಂತ್ರಿಯವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆಯಿತು. ದೇವಳದ ಅರ್ಚಕ ನರೇಂದ್ರ ಭಟ್,...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...