Monday, July 7, 2025

ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ :  ಮಾ.08-12ರವರೆಗೆ ವರ್ಷಾವಾದಿ ಜಾತ್ರಾ ಮಹೋತ್ಸವ

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವದಿ ಜಾತ್ರಾ ಮಹೋತ್ಸವ ಮತ್ತು ಮಹಾರಥೋತ್ಸವ ಕ್ಷೇತ್ರದ ತಂತ್ರಿಗಳಾದ ವೇ.ಮೂ. ಶ್ರೀಪಾದ ಪಾಂಗಣ್ಣಾಯ ಅವರ ನೇತೃತ್ವದಲ್ಲಿ ಮಾ.08 ರಿಂದ ಮಾ.12ರವರೆಗೆ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಮಾ.೮ರಂದು ಬೆಳಗ್ಗೆ ದೇವತಾ ಪ್ರಾರ್ಥನೆ, ಧ್ವಜಾರೋಹಣ, ಭಜನೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮಾ.೯ರಂದು ತ್ರಿಕಾಲ ಉತ್ಸವ, ರಾತ್ರಿ ಬಲಿ ಉತ್ಸವ, ಭಜನೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮಾ.೧೦ರಂದು ಉತ್ಸವಗಳು, ಭಜನೆ ಸಂಜೆ ಪರಿಮಳ ಕಾಲನಿ ತುಳು ನಾಟಕ ನಡೆಯಲಿದೆ. ಮಾ.೧೧ ಚಂಡಿಕಾ ಯಾಗ, ದರ್ಶನ ಬಲಿ, ಭಜನೆ, ಕವಾಟ ಬಂಧನ, ನೃತ್ಯ ಸಿಂಚನ ಕಾರ್ಯಕ್ರಮ ನಡೆಯಲಿದೆ. ಮಾ.೧೨ರಂದು ಚಂಡಿಕಾ ಯಾಗ, ತುಲಾಭಾರ ಸೇವೆ, ರಾತ್ರಿ ದೈವಗಳಿಗೆ ನೇಮೋತ್ಸವ, ಮಹಾರಥೋತ್ಸವ, ಧ್ವಜಾವರೋಹಣ, ತುಳು ಯಕ್ಷಗಾನ ಪ್ರದರ್ಶನ ನಡೆಯಲಿದೆ. ಮಾ.೧೩ರಂದು ರಂಗ ಪೂಜೆ, ಸಂಪ್ರೋಕ್ಷಣೆ ನಡೆಯಲಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಪೂಜಾರಿ ಕಲ್ಲಕೊಡಂಗೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ಏಮಾಜೆ ಶಾಲೆ : ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ..

ಬಂಟ್ವಾಳ : ಶಾಲಾ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮಹತ್ವದ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ. ಸರಕಾರಿ ಕಿ. ಪ್ರಾ ಶಾಲೆ ಏಮಾಜೆಯಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ...

ದ.ಕ.ಜಿಲ್ಲೆಯ ಮರಳು, ಕೆಂಪುಕಲ್ಲು ಗಣಿಗಾರಿಕೆ: ಸ್ಪೀಕರ್, ಜಿಲ್ಲಾ ಉಸ್ತುವರಿ ಸಚಿವರ ನೇತೃತ್ವದಲ್ಲಿ ಚರ್ಚೆ

ಬೆಂಗಳೂರಿನ ವಿಧಾನಸೌಧದಲ್ಲಿ  ಸ್ಪೀಕರ್ ಯುಟಿ ಖಾದರ್ ಹಾಗೂ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಮರಳು ಹಾಗೂ ಕೆಂಪುಕಲ್ಲು ಗಣಿಗಾರಿಕೆ ಕುರಿತಂತೆ ವಿಸ್ತ್ರತವಾದ ಚರ್ಚೆ ನಡೆಸಲಾಯಿತು. ದಕ್ಷಿಣ ಕನ್ನಡ...

ಬೆಂಜನಪದವು ಪ್ರೌಢಶಾಲೆ : ಶಾಲಾ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ..

ಬಂಟ್ವಾಳ: ಇಂದು ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ ನಡೆಯಿತು. ಶಾಲಾ ಸಂಸತ್ತಿನ ಮುಖ್ಯ ಮಂತ್ರಿ ಸೇರಿದಂತೆ ವಿವಿಧ ಇಲಾಖೆಗಳ ಮಂತ್ರಿಗಳಿಗೆ ರಾಜ್ಯಪಾಲರು ಪ್ರಮಾಣ...

ಮುಂದುವರಿದ ಮಳೆ ಅಬ್ಬರ : ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ..

ಬಂಟ್ವಾಳ : ಶನಿವಾರವೂ ಮಳೆಗೆ ತಾಲೂಕಿನ ಅಲ್ಲಲ್ಲಿ ಹಾನಿಯಾಗಿದ್ದು, ಕಡೇಶ್ವಾಲ್ಯ ಗ್ರಾಮದ ನಡ್ಯೇಲು ಎಂಬಲ್ಲಿ ಕಾಲುಸಂಕ ಮುರಿದು ಬಿದ್ದಿರುತ್ತದೆ. ಇಲ್ಲಿನ ಗ್ರಾಮಪಂಚಾಯತ್ ಪೂರ್ವದಲ್ಲಿಯೇ ಎಚ್ಚರಿಕೆ ಫಲಕ ಅಳವಡಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿರುವುದಿಲ್ಲ. ತೋಡಿನಲ್ಲಿ...