Wednesday, February 12, 2025

ದ.ಕ.ಜಿಲ್ಲಾ ಕಾಂಗ್ರೆಸ್ ಮುಖಂಡ, ಅಹಿಂದ ನಾಯಕ ಪದ್ಮನಾಭ ನರಿಂಗಾನ ಇನ್ನಿಲ್ಲ

ದ.ಕ.ಜಿಲ್ಲಾ ಕಾಂಗ್ರೆಸ್ ಮುಖಂಡ, ಅಹಿಂದ ನಾಯಕ , ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಾಮಾ ಕಾರ್ಯ ಕರ್ತ ಪದ್ಮನಾಭ ನರಿಂಗಾನ(78) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಎಸ್.ಸಿ.ಘಟಕದ ಕಾಂಗ್ರೇಸ್ ಜಿಲ್ಲಾಧ್ಯಕ್ಷರಾಗಿ, ಅಕ್ರಮಸಕ್ರಮ ಸಮಿತಿಸದಸ್ಯರಾಗಿ ಕಾಂಗ್ರೆಸ್ ಪಕ್ಷದ ಅ‌ನೇಕ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ, ಓರ್ವ ಸ್ನೇಹಜೀವಿ ನಾಯಕರಾಗಿ ಗುರುತಿಸಿಕೊಂಡವರು.

ಪರಿಶಿಷ್ಟ ಜಾತಿ ಪಂಗಡದ ಸಮುದಾಯದ ಏಳಿಗೆಗೆ ಅನೇಕ ಹೋರಾಟವನ್ನು ಮಾಡಿ ಸಮಸ್ಯೆಗಳ ಪರಿಹಾರ ಮಾಡಿದ ಹೆಗ್ಗಳಿಕೆ ಇವರದು.
ಸಮಾಜಸೇವೆಯ ಮೂಲಕ ಯಾರೊಂದಿಗೂ ವಿರೋಧ ಕಟ್ಟಿಕೊಳ್ಳದೆ ,ಉತ್ತಮ ಜನಪ್ರಗತಿ ನಿಧಿಯಾಗಿಯೂ ಹೆಸರು ಮಾಡಿದವರು.
ಇವರನ್ನು ಕಳೆದುಕೊಂಡ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ.

ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್,ಮಾಜಿ ಸಚಿವ ಬಿ.ರಮಾನಾಥ ರೈ, ಸಹಿತ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

More from the blog

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...