Thursday, February 13, 2025

ಮಾ.17-25 : ಪಾಂಡವರಕಲ್ಲು ಶ್ರೀರಾಜನ್ ದೈವ ಕೊಡಮಣಿತ್ತಾಯ ಶ್ರೀ ಬ್ರಹ್ಮಬೈದೆರೆ ಗರೋಡಿಯ ವಾರ್ಷಿಕ ಜಾತ್ರೋತ್ಸವ

ಬಂಟ್ವಾಳ: ಬಂಟ್ವಾಳ ತಾಲೂಕಿನ ಬಡಗ ಕಜೆಕಾರಿನ ಪಾಂಡವರಕಲ್ಲು ಶ್ರೀರಾಜನ್ ದೈವ ಕೊಡಮಣಿತ್ತಾಯ ಶ್ರೀ ಬ್ರಹ್ಮಬೈದೆರೆ ಗರೋಡಿಯ ವಾರ್ಷಿಕ ಜಾತ್ರೋತ್ಸವವು ಮಾ.17ರಿಂದ ಮಾ.25ರವರೆಗೆ ನಡೆಯಲಿದೆ.

ಮಾ.17ರಂದು ಶ್ರೀ ಕ್ಷೇತ್ರದಲ್ಲಿ ದೊಂಪದ ಬಲಿ ನೇಮೋತ್ಸವ ನಡೆಯಲಿದ್ದು, ಮಾ.21ರಂದು ಶ್ರೀ ಕೊಡಮಣಿತ್ತಾಯ, ಶ್ರೀ ಬ್ರಹ್ಮಬೈದ್ಯರೆ ಗರೋಡಿ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಲಾದ ದೈವಸ್ಥಾನದಲ್ಲಿ ಶ್ರೀ ಧರ್ಮದೈವ ವಿಷ್ಣುಮೂರ್ತಿ ಪ್ರತಿಷ್ಠಾ ಮಹೋತ್ಸವ ನಡೆಯಲಿದೆ.

ರಾತ್ರಿ ಕಜೆಕಾರ್ ಗುತ್ತಿನಿಂದ ದೈವ ಕೊಡಮಣಿತ್ತಾಯ ಮತ್ತು ಪಟ್ರಾಡಿ ತಾವಿನಿಂದ ಶ್ರೀ ಬ್ರಹ್ಮಬೈದೆರೆ ಭಂಡಾರ ಬಂದು ಬಲಿ ಉತ್ಸವ ನೇರವೇರಲಿದೆ. ಮಾ.22ರಂದು ಧರ್ಮದೈವ ಶ್ರೀ ವಿಷ್ಣುಮೂರ್ತಿ ಪ್ರತಿಷ್ಠೆ, ಹಾಗೂ ಕೊಡಿಮರ ತೈಲಾಧಿವಾಸ ನಡೆಯಲಿದೆ. ಮಧ್ಯಾಹ್ನ ಶ್ರೀ ಕ್ಷೇತ್ರದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ, ಹಾಗೂ ರಾತ್ರಿ ಧರ್ಮದೈವ ವಿಷ್ಣುಮೂರ್ತಿ ದೈವದ ನೇಮ, ಹಾಗೂ ಮಾ.23ರಂದು ಶ್ರೀರಾಜನ್ ದೈವ, ಕೊಡಮಣಿತ್ತಾಯ ದೈವ ಮತ್ತು ಕಲ್ಕುಡ ದೈವದ ನೇಮೋತ್ಸವ ನಡೆಯಲಿದೆ.

ಮಾ.24ರಂದು ಪಿಲಿಚಾಮುಂಡಿ ನೇಮ, ಹಾಗೂ ಶ್ರೀ ಬ್ರಹ್ಮಬೈದ್ಯೆರೆ ಜಾತ್ರೋತ್ಸವ ನಡೆಯಲಿದ್ದು, ರಾತ್ರಿ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸುಡುಮದ್ದು ಪ್ರದರ್ಶನ, ಹಾಗೂ ಗರೋಡಿ ಫ್ರೆಂಡ್ಸ್ ಪಾಂಡವರಕಲ್ಲು ಇವರ ಪ್ರಾಯೋಜಕತ್ವದಲ್ಲಿ ಮಂಜೇಶ್ವರದ ಶಾರದಾ ಆಟ್ಸ್ ತಂಡದ ಐಸಿರಿ ಕಲಾವಿದರಿಂದ ಕಲಿಗದ ಮಾಯ್ಕಾರೆ ಪಂಜುರ್ಲಿ ಎಂಬ ಭಕ್ತಿ ಪ್ರಧಾನ ನಾಟಕ ನಡೆಯಲಿದೆ. ಬಳಿಕ ಸಾರ್ವಜನಿಕ ಅನ್ನ ಸಂತರ್ಪಣೆ ಹಾಗೂ ರಾತ್ರಿ 10ಕ್ಕೆ ಬೈದೆರು ಗರೋಡಿ ಇಳಿದು, ನೇಮೋತ್ಸವ ನಡೆಯಲಿದೆ.

 

More from the blog

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...