Monday, January 26, 2026

*ಸಲ್-ಸಬೀಲ್ : ಸೃಜನಶೀಲ ಕೌಶಲ್ಯಗಳನ್ನು ಪ್ರೋತ್ಸಾಹಿಸಲು ಆನ್‌ಲೈನ್ ಡ್ರಾಯಿಂಗ್ ಸ್ಫರ್ದೆ – ಆಗಷ್ಟ್ 14 ಕೊನೆಯ ದಿನ*     *ಸ್ವಾತಂತ್ರ್ಯ ದಿನದ ಅಂಗವಾಗಿ*  *ಸೃಜನಶೀಲ ಕೌಶಲ್ಯಗಳನ್ನು* *ಪ್ರೋತ್ಸಾಹಿಸಲು ಕಲಾ ಸ್ಪರ್ಧೆ*

ಪಾಣೆಮಂಗಳೂರು : ಸಲ್ ಸಬೀಲ್ ವಿದ್ಯಾರ್ಥಿ ಸಂಘಟನೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆನ್ಲೈನ್ ಡ್ರಾಯಿಂಗ್ ಸ್ಪರ್ಧೆಯನ್ನು ಆಯೋಜಿಸಿದ್ದು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕರಿಗೆ ಭಾಗವಹಿಸಲು ಮುಕ್ತ ಅವಕಾಶವಿದೆ.. ಡ್ರಾಯಿಂಗ್ ಕಳುಹಿಸಲು ಇದೇ ಆಗಷ್ಟ್ 14 ಕೊನೆಯ ದಿನವಾಗಿದೆ..

ವಿಷಯ‌ : ದೇಶಭಕ್ತಿ

1. ಸ್ಪರ್ಧೆಯಲ್ಲಿ ಬಂಟ್ವಾಳ ತಾಲೂಕು ವ್ಯಾಪ್ತಿಯ ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ.

2. ಭಾಗವಹಿಸುವವರು ಅವನ/ಅವಳ ಸ್ವತಂತ್ರ ಕಲೆಯನ್ನು ಪ್ರಸ್ತುತಪಡಿಸಬೇಕು

3. ಯಾವುದೇ ಬಣ್ಣ ಮತ್ತು ಪೂರಕ ಸಾಮಾಗ್ರಿ ಬಳಸಲು ಅವಕಾಶವಿದೆ.

ಡ್ರಾಯಿಂಗ್ ಗಾಗಿ A4 ಅಥವಾ A3 ಶೀಟ್‌ಗಳನ್ನು ಬಳಸಬೇಕು.

4. ಭಾಗವಹಿಸುವವರು ಮೊದಲ ಪುಟದಲ್ಲಿ ತಮ್ಮ ಹೆಸರು, ವಿಳಾಸ ಮತ್ತು ಫೋನ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು

5. ಯಾವುದೇ ಧರ್ಮದ ಸಾಂಸ್ಕೃತಿಕ ಮುಖ್ಯಾಂಶಗಳನ್ನು ಪರಿಗಣಿಸಲಾಗುವುದಿಲ್ಲ

6. ವಿಷಯವು ಹಕ್ಕುಸ್ವಾಮ್ಯವಲ್ಲ ಅಥವಾ ಆಡಳಿತ ವ್ವವಸ್ಥೆಯ ಪರ ಅಥವಾ ವಿರುದ್ದವಾಗಿರಬಾರದು ಎಂದು ಕಾಳಜಿ ವಹಿಸಬೇಕು

7.ಸ್ಪರ್ಧೆಯಲ್ಲಿ ಪ್ರಥಮ ,ದ್ವಿತೀಯ, ತೃತೀಯ ಮತ್ತು ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಗುವುದು

email : [email protected]

WhatsApp. 9845731348, 90353 77916 14 ಆಗಸ್ಟ್ 2022 ಕೊನೆಯ ದಿನ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...