Sunday, February 9, 2025

ಪ್ರವಾಹವೇರುವ ಅಪಾಯ: ಪಾಣೆಮಂಗಳೂರು ಗಂಜಿ ಕೇಂದ್ರಕ್ಕೆ 80ಕ್ಕೂ ಅಧಿಕ ಮಂದಿಯ ಸ್ಥಳಾಂತರ

ಬಂಟ್ವಾಳ: ನೇತ್ರಾವತಿಯಲ್ಲಿ ಪ್ರವಾಹವೇರುವ ಅಪಾಯ ಇರುವ ಕಾರಣ ಗುರುವಾರ ರಾತ್ರಿ ಬಂಟ್ವಾಳದ ಪಾಣೆಮಂಗಳೂರು ಶಾರದಾ ಪ್ರೌಢಶಾಲೆಯಲ್ಲಿರುವ ಗಂಜಿಕೇಂದ್ರಕ್ಕೆ ನೇತ್ರಾವತಿ ತೀರದಲ್ಲಿರುವ ಸುಣ್ಣದಗೂಡು ಪ್ರದೇಶದ ಸುಮಾರು 80ಕ್ಕೂ ಅಧಿಕ ಜನರನ್ನು ರಾತ್ರಿ ಸುಮಾರು 9.45ರ ವೇಳೆ ಸ್ಥಳಾಂತರಿಸಲಾಯಿತು.


ಇವರಲ್ಲಿ ಕಾರ್ಮಿಕರು, ಅವರ ಕುಟುಂಬದವರು ಇದ್ದಾರೆ. ಮುಂಜಾಗರೂಕತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದ್ದಾರೆ. ಪುರಸಭೆ ಅಧಿಕಾರಿಗಳು, ಕಂದಾಯಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

More from the blog

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...