Thursday, June 26, 2025

ಗುಡ್ಡೆಯಂಗಡಿ ನಾಗರಿಕರಿಂದ ಗ್ಯಾಸ್ ಪಂಪ್ ವಿರೋಧಿಸಿ ಜಿಲ್ಲಾಧಿಕಾರಿಗೆ ಮನವಿ

ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ಗುಡ್ಡೆಅಂಗಡಿಯಲ್ಲಿ ನಿರ್ಮಾಣಕ್ಕೆ ಮುಂದಾಗಿರುವ ಗ್ಯಾಸ್ ಪಂಪನ್ನು ವಿರೋಧಿಸಿ ಗುಡ್ಡೆಅಂಗಡಿ ನಾಗರಿಕರಿಂದ ಗ್ಯಾಸ್ ಪಂಪ್ ವಿರೋಧಿಸಿ ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

ಈ ಗ್ಯಾಸ್ ಪಂಪ್ ನಿಂದ ಅದರ ಪಕ್ಕದಲ್ಲಿ ವಾಸವಿರುವ ಜನಸಾಮಾನ್ಯರಿಗೆ ಅಪಾಯಕಾರಿಯಾಗಿದ್ದು, ಇದರ ಬಗ್ಗೆ ಮನೆಯವರಲ್ಲಿ ಕೇಳಿದಾಗ ಎರಡು ಮನೆಯನ್ನು ಬಿಟ್ಟು ಉಳಿದ ಯಾವುದೇ ಮನೆಯವರಿಗೆ ಮಾಹಿತಿ ಇಲ್ಲ, ಜನಸಾಮಾನ್ಯರ ಅಭಿಪ್ರಾಯ ಕೇಳದೇ ಗೌಪ್ಯವಾಗಿ ಈ ಒಂದು ಅನುಮತಿ ಪ್ರಕ್ರಿಯೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಯಲ್ಲಿ ದೂರಲಾಗಿದೆ. ನಿಯೋಗವು ಸಂಬಂಧಪಟ್ಟ ಎಲ್ಲಾ ಇಲಾಖೆಗಳಿಗೆ, (ಪುರಸಭೆ, ತಾಲೂಕು ದಂಡಾದಿಕಾರಿ, ಗ್ರಾಮ ಲೆಕ್ಕಿಗ, ಅಗ್ನಿ ಶಾಮಕ ದಳ, ಪರಿಸರ ಇಲಾಖೆ, ಪೋಲೀಸ್ ಠಾಣೆ ಇತರೇ) ಮನವಿ ಸಲ್ಲಿಸಿ, ಅನುಮತಿ ನೀಡಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಯಿತು.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...