Saturday, July 5, 2025

ಪಾಂಗಲ್ಪಾಡಿ ದೇವಸ್ಥಾನ: ಸೇವಾಂಜಲಿ ಪ್ರತಿಷ್ಠಾನದ ಕೆ.ಕೃಷ್ಣ ಕುಮಾರ್ ಪೂಂಜರಿಗೆ ವಿಷ್ಣುಪ್ರಸಾದ ಪ್ರಶಸ್ತಿ ಪ್ರದಾನ

ಬಂಟ್ವಾಳ: ಬಂಟ್ವಾಳ ತಾಲೂಕು ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾವರ್ಧಂತಿ ಹಾಗೂ ವರ್ಷಾವಧಿ ಜಾತ್ರೆ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಕ್ಷೇತ್ರದ ವತಿಯಿಂದ ಕೊಡ ಮಾಡುವ ವಿಷ್ಣು ಪ್ರಸಾದ ಪ್ರಶಸ್ತಿಯನ್ನು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಅಧ್ಯಕ್ಷ ಕೆ.ಕೃಷ್ಣ ಕುಮಾರ್ ಪೂಂಜ ಅವರಿಗೆ ಪ್ರದಾನ ಮಾಡಲಾಯಿತು.

ಮಾಜಿ ಸಚಿವ ಬಿ.ರಮಾನಾಥ ರೈ ಅವರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಸೇವೆಯಿಂದ ಸಾರ್ಥಕತೆ ಎಂಬ ಧ್ಯೇಯ ವಾಕ್ಯದಂತೆ ಆರೋಗ್ಯ, ಶಿಕ್ಷಣ, ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಸೇವಾಂಜಲಿ ಪ್ರತಿಷ್ಠಾನದ ಮೂಲಕ ಅನುಪಮ ಸೇವೆ ಸಲ್ಲಿಸುತ್ತಿರುವ ಕೃಷ್ಣ ಕುಮಾರ್ ಪೂಂಜ ಅವರ ಸೇವಾ ಕಾರ್ಯ ಅಭಿನಂದನೀಯ ಎಂದು ಹೇಳಿದರು.

ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಪ್ರಧಾನ ಅರ್ಚಕರಾದ ಟಿ.ವಿ.ಶ್ರೀಧರ ರಾವ್ ಪೇಜಾವರ ಅವರು ಅಧ್ಯಕ್ಷತೆ ವಹಿಸಿದ್ದರು.

ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಶುಭ ಹಾರೈಸಿದರು. ಸನಾತನ ಸಂಸ್ಥೆಯ ಉಪೇಂದ್ರ ಆಚಾರ್ಯ ಧಾರ್ಮಿಕ ಉಪನ್ಯಾಸ ನೀಡಿದರು. ಜಿ.ಪಂ.ಮಾಜಿ ಸದಸ್ಯ ಬಿ.ಪದ್ಮಶೇಖರ ಜೈನ್, ಮಡಂತ್ಯಾರು ಜನಜಾಗೃತಿ ವೇದಿಕೆಯ ಪದ್ಮನಾಭ ಸಾಲ್ಯಾನ್ ಕೋಂಕಡ್ಡ, ಕ್ಷೇತ್ರದ ತಂತ್ರಿಗಳಾದ ಉದಯ ಪಾಂಗಣ್ಣಾಯ, ಸಿರಿಗುಂಡದ ಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಮೋಹನ ಶೆಟ್ಟಿ ನರ್ವಲ್ದಡ್ಡ ವೇದಿಕೆಯಲ್ಲಿದ್ದರು.

 

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ.ರಾಮಕೃಷ್ಣ ಎಸ್.ಅವರು ಸ್ವಾಗತಿಸಿದರು. ದಯಾನಂದ ಎರ್ಮೆನಾಡು ವಂದಿಸಿದರು.ಸತೀಶ ಕರ್ಕೇರ ಸಹಕರಿಸಿದರು. ಪತ್ರಕರ್ತ ಗೋಪಾಲ ಅಂಚನ್ ಕಾರ್ಯಕ್ರಮ ನಿರೂಪಿಸಿದರು.

More from the blog

Agriculture : ‘ರಥಬೀದಿ ಜವನೆರ್’ ತಂಡದ ಸದಸ್ಯರಿಂದ ಭತ್ತದ ನಾಟಿ..

ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಭತ್ತದ ಕೃಷಿ ಕಡಿಮೆಯಾಗುತ್ತಾ ಬರುವ ಕಾಲಘಟ್ಟದಲ್ಲಿ ಯುವಕರ ತಂಡವೊಂದು ಸಮಾಜ ಸೇವೆಯ ಉದ್ದೇಶದಿಂದ ಭತ್ತದ ನಾಟಿಯನ್ನು ಮಾಡಿ ಗ್ರಾಮದಲ್ಲಿ ಗಮನ ಸೆಳೆದಿದ್ದಾರೆ. "ರಥಬೀದಿ ಜವನೆರ್ " ಎಂಬ ಹೆಸರಿನ ಸುಮಾರು 15...

ಅಕ್ರಮ ಗಣಿಗಾರಿಕೆ : ಆರೋಪಿಗಳ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು..

ಬಂಟ್ವಾಳ : ಪುರಸಭಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಪಲ್ಲಮಜಲು ಸಮೀಪದ ಕುವಡ್ಕ ಎಂಬಲ್ಲಿ ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿದ್ದು,ಆರೋಪಿಗಳ ಬಗ್ಗೆ ಪ್ರಕರಣ ದಾಖಲಿಸುವಂತೆ ಗಣಿ ಇಲಾಖೆಯ ಅಧಿಕಾರಿಗಳು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು...

ಆರ್.ಎಸ್.ಎಸ್. ನಿಷೇದ ಬಗೆಗಿನ ಸಚಿವರ ಬೇಜವಾಬ್ದಾರಿ ಹೇಳಿಕೆ ಖಂಡನೀಯ : ಪ್ರಭಾಕರ ಪ್ರಭು

ಬಂಟ್ವಾಳ : ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ ಆರ್. ಎಸ್ ಎಸ್. ನಿಷೇಧಿಸುವ ತೀರ್ಮಾನ ಮಾಡುತ್ತೇವೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ನೀಡಿರುವ ದುರಹಂಕಾರದ,...

Bantwal Rain Damage: ಅನೇಕ ಮನೆಗಳಿಗೆ ಹಾನಿ

ಬಂಟ್ವಾಳ: ಜುಲೈ 3 ರಂದು ರಾತ್ರಿ ಸುರಿದ ಮಳೆಗೆ ತಾಲೂಕಿನ ಅನೇಕ ಕಡೆಗಳಲ್ಲಿ ಹಾನಿ ಸಂಭವಿಸಿದ್ದು, ಲಕ್ಷಾಂತರ ರೂ‌ ನಷ್ಟ ಸಂಭವಿಸಿದೆ. ನೆಟ್ಲ ಮುನ್ನೂರು ಗ್ರಾ.ಪಂ.ವ್ಯಾಪ್ತಿಯ ಏಮಾಜೆ ಭಜನಾ ಮಂದಿರ ಬಳಿಯ ದೇವಪ್ಪ...