Thursday, June 26, 2025

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಉಮರ್ ಫಾರೂಕ್ ಫರಂಗಿಪೇಟೆ

ಬಂಟ್ವಾಳ, ಡಿ.1: ವಿದ್ಯಾರ್ಥಿಗಳಲ್ಲಿ ಉತ್ತಮ ಜೀವನ ರೂಪಿಸಿ ಸುಶಿಕ್ಷಿತ ಸಮಾಜವನ್ನು ನಿರ್ಮಿಸುವ ಮೂಲಕ ದೇಶದ ಅಭಿವೃದ್ಧಿಗೆ ಶಿಕ್ಷಕರು ನೀಡುತ್ತಿರುವ ಪಾತ್ರ ಮಹತ್ತರವಾದದ್ದು ಎಂದು ಟುಡೇ ಫೌಂಡೇಶನ್ ಅಧ್ಯಕ್ಷ ಎಫ್.ಉಮರ್ ಫಾರೂಕ್ ಫರಂಗಿಪೇಟೆ ಹೇಳಿದರು.

ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಪುದು ಮಾಪ್ಲ ಇಲ್ಲಿನ ನಿವೃತ್ತಿ ಹೊಂದುತ್ತಿರುವ ಸಹ ಶಿಕ್ಷಕಿ ಪ್ರಭಾವತಿ ಬಿ. ಅವರಿಗೆ ಮಂಗಳವಾರ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಒಂದು ದೇಶದ ಸಾಕ್ಷರತೆಯ ಗುಣಮಟ್ಟ ಆ ದೇಶದ ಅಭಿವೃದ್ಧಿಯನ್ನು ನಿರ್ಧರಿಸುತ್ತದೆ. ಸ್ವಾತಂತ್ರ್ಯ ಬಳಿಕ ಭಾರತದ ಸಾಕ್ಷರತೆ ಮಟ್ಟ ಹೆಚ್ಚುತ್ತಾ ಸಾಗಿದ್ದು ಇದರ ಹಿಂದೆ ಶಿಕ್ಷಕರ ಪಾತ್ರ ಮಹತ್ತರದ್ದಾಗಿದೆ. ಶಿಕ್ಷಕರು ನಿವೃತ್ತಿಯ ಬಳಿಕವೂ ಶಿಕ್ಷಣ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ನಿವೃತ್ತಿ ಎಂದರೆ ಮನೆಯಲ್ಲಿ ವಿಶ್ರಾಂತಿ ಪಡೆಯುವುದು ಎಂಬ ಅಭಿಪ್ರಾಯ ಕೆಲವರಲ್ಲಿ ಇದೆ. ನಿವೃತ್ತಿ ಹೊಂದಿದವರು ಆ ಕ್ಷೇತ್ರದಲ್ಲಿ ಅಪಾರ ಜ್ಞಾನ, ಅನುಭವ, ಪ್ರಭುದ್ವತೆ ಹೊಂದಿರುತ್ತಾರೆ. ಅದನ್ನು ಹೊಸ ತಲೆಮಾರಿನ ಶಿಕ್ಷಕರಿಗೆ ಹಂಚಿಕೊಳ್ಳುವ ಮೂಲಕ, ಸಲಹೆ, ತರಬೇತಿ ನೀಡುವ ಕಾರ್ಯದಲ್ಲಿ ತೊಡಗಿದಾಗ ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಮತ್ತಷ್ಟು ಬದಲಾವಣೆ ಸಾಧ್ಯ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಮಾತನಾಡಿ, ಮಗುವಿನ ಶೈಕ್ಷಣಿಕ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರು ಮತ್ತು ಪೋಷಕರು ಕಾರಣ. ಶಿಕ್ಷಕರು ಇಲ್ಲದ ಸಮಾಜವನ್ನು ಊಹಿಸಲೂ ಸಾಧ್ಯವಿಲ್ಲ. ಹಾಗಾಗಿ ಶಿಕ್ಷಕ ವೃತ್ತಿ ಪಾವಿತ್ರವಾದುದು. ನಿವೃತ್ತಿ ಬಳಿಕವೂ ಶಿಕ್ಷಕರು ತಾವು ಕಾರ್ಯನಿರ್ವಹಿಸಿದ ಶಾಲೆಗೆ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಬದುಕಿನ ಬಗ್ಗೆ ಸಲಹೆಗಳನ್ನು ನೀಡಬೇಕು ಎಂದರು.

ಸಮಾರಂಭದಲ್ಲಿ ಪುದು ಮಾಪ್ಲ ಶಾಲಾ ಮುಖ್ಯ ಶಿಕ್ಷಕಿ, ಸಹ ಶಿಕ್ಷಕಿ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಸದಸ್ಯರು ಹಾಗೂ ಟುಡೇ ಫೌಂಡೇಶನ್ ಪದಾಧಿಕಾರಿಗಳು ಉಪಸ್ಥಿತರಿದ್ದು ನಿವೃತ್ತ ಶಿಕ್ಷಕಿ ಪ್ರಭಾವತಿ ಬಿ. ಅವರನ್ನು ಸನ್ಮಾನಿಸಿದರು.

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...