Thursday, June 26, 2025

ಯುವ ವೇದಿಕೆ ಪೆರಾಜೆ ಇದರ ವತಿಯಿಂದ ದೀಪಾವಳಿ ಆಚರಣೆ

ಭಾರತೀಯ ಜನ ಸಂಘದ ಕಾಲದಲ್ಲಿ ಪಕ್ಷ ಸಂಘಟನೆ ಮಾಡಿದ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ ಕಾರ್ಯಕರ್ತ, ಪೆರಾಜೆ ಯುವಕ ಮಂಡಲದ ಸ್ಥಾಪನೆಯ ರೂವಾರಿ ದಿವಂಗತ ಚಂದಪ್ಪ ಸಪಲ್ಯ ರ ಮನೆಯಲ್ಲಿ ಯುವ ವೇದಿಕೆ ಪೆರಾಜೆಯ ಸದಸ್ಯರು ದೀಪ ಬೆಳಗಿ ಹಿರಿಯರಿಂದ ಆಶೀರ್ವಾದ ಪಡೆದು, ಸಂಘಟನೆಗೋಸ್ಕರ ತನ್ನೆಲ್ಲವನ್ನು ತ್ಯಾಗ ಮಾಡಿದ ಚಂದಪ್ಪರವರ ಕುಟುಂಬವನ್ನು ಸ್ಮರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಹಿರಿಯರಾದ ಬಿ. ಟಿ. ನಾರಾಯಣ ಭಟ್, ಯುವ ವೇದಿಕೆಯ ಸಂಚಾಲಕರಾದ ರಾಜಾರಾಮ್ ಕಾಡೂರ್, ಕಾರ್ಯದರ್ಶಿ ಪ್ರಶಾಂತ್ ನಡುಗುಡ್ಡೆ, ಉಪಾಧ್ಯಕ್ಷರಾದ ಹರೀಶ್ ರೈ ಪಾನೂರ್, ಭಾರತೀಯ ಜನತಾ ಪಕ್ಷದ ಗ್ರಾಮ ಸಹ ಪ್ರಮುಖ್ ಉಮೇಶ್ ಎಸ್. ಪಿ. ಇನ್ನಿತರ ವೇದಿಕೆಯ ಸದಸ್ಯರು ಉಪಸ್ಥಿತರಿದ್ದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...