Thursday, February 13, 2025

ಪೆರುವಾಯಿ: ಶತಮಾನೋತ್ಸವ ಆಚರಣೆ

ವಿಟ್ಲ: ಪೆರುವಾಯಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಣೆಯ ಉದ್ಘಾಟನಾ ಕಾರ್‍ಯಕ್ರಮ ಶನಿವಾರ ನಡೆಯಿತು.
ಬೈಕಂಪಾಡಿ ವೆಸ್ಟರ್ನ್ ಡಾಟಾ ಫಾರ್ಮ್ಸ್ ನ ಚಂದ್ರಶೇಖರ ರೈ ಮಾತನಾಡಿ ಸಂಭ್ರಮದ ಜತೆಯಲ್ಲಿ ನಮಗೆ ಜವಾಬ್ದಾರಿ ಇದೆ. ಶಾಲೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಬಗ್ಗೆ ಚಿಂತನೆ ಅಗತ್ಯ. ಹಳೆ ವಿದ್ಯಾರ್ಥಿಗಳು ಒಟ್ಟಾಗಿ ಮನಸ್ಸು ಮಾಡಿದಾಗ ಶಾಲೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.
ಶಾಲಾ ಸಂಚಾಲಕ ಸಚಿನ್ ಅಡ್ವಾಯಿ ಅಧ್ಯಕ್ಷತೆ ವಹಿಸಿದ್ದರು. ಪೆರುವಾಯಿ ಎಸ್ ಎಸ್ ಎಫ್ ವತಿಯಿಂದ ಗ್ರೈಡರ್ ಅನ್ನು ಕೊಡುಗೆಯಾಗಿ ನೀಡಲಾಯಿತು. ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಗೌರವ ಶಿಕ್ಷಕರನ್ನು ಗೌರವಿಸಲಾಯಿತು. ಕ್ರೀಡೆಯಲ್ಲಿ ಸಾಧನೆಗೈದ ಹಾಗೂ ವಿವಿಧ ಚಟುವಟಿಕೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಹಿರಿಯ ಶಿಕ್ಷಕರಾದ ಗೋವಿಂದ ಭಟ್, ರಾಮ್ ಭಟ್, ಬಾಲಕೃಷ್ಣ ಭಂಡಾರಿ, ನರಸಿಂಹ ಭಟ್, ಖಲಿಸ್ತಾ ಮೊಂತೆರೊ, ಗೀತಾ, ರಾಮಯ್ಯ ಶೆಟ್ಟಿ, ಪಂಜ ಸಂಜೀವ ಶೆಟ್ಟಿ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕ ಕುಂಞ ನಾಯ್ಕ ಹಾಗೂ ಶಿಕ್ಷಕರಾದ ಪ್ರಭಾಕರ ಎಂ, ಎ. ವಿಷ್ಣು ಭಟ್, ಜಯರಾಮ ರೈ ಅವರನ್ನು ಸನ್ಮಾನಿಸಲಾಯಿತು.
ಮಂಗಳೂರು ಸೆಂಟರ್ ಇನ್ ಸ್ಟಿಟ್ಯೂಟ್ ಆಫ್ ಎಂಜಿನಿಯರ್ ಮಾಜಿ ಚೇಯರ್ ಮ್ಯಾನ್ ಜಿ ರಘುನಾಥ ರೈ, ಒಡಿಯೂರು ಗ್ರಾಮ ವಿಕಸ ಯೋಜನೆಯ ಬಂಟ್ವಾಳ ತಾಲೂಕು ವಿಸ್ತಣಾಧಿಕಾರಿ ಸದಾಶಿವ ಅಳಿಕೆ, ಶಿಕ್ಷಣ ಸಂಯೋಜಕಿ ಪುಷ್ಟಾ, ಮಕ್ಕಳ ಲೋಕದ ಗೌರವಾಧ್ಯಕ್ಷೆ ಸವಿತಾ ಎಸ್ ಭಟ್ ಅಡ್ವಾಯಿ, ಉಪಸ್ಥಿತರಿದ್ದರು.
ಶಿಕ್ಷಕ ಜಯರಾಮ ರೈ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಕುಂಞ ನಾಯ್ಕ ವರದಿ ಮಂಡಿಸಿದರು. ನಾಗೇಶ್ ಮಾಸ್ಟರ್ ಪುತ್ತೂರು ನಿರೂಪಿಸಿದರು. ಶಿಕ್ಷಕಿಯಾದ ಶ್ವೇತಾ, ಸೆಲ್ಮಾ ಬೀಬಿ, ಸಮೀಮ, ರಾಜೇಶ್ವರೀ, ಬಹುಮಾನಿತರ ಪಟ್ಟಿ ಓದಿದರು. ರಾಜೇಂದ್ರ ರೈ ವಂದಿಸಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...