Wednesday, February 12, 2025

ವಾಹನ ಸವಾರರಿಗೆ ಗುಡ್​ನ್ಯೂಸ್ ; ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್‌ಗೆ 2 ರೂಪಾಯಿ ಇಳಿಕೆ

ಚುನಾವಣೆ ಹೊಸ್ತಿಲಲ್ಲಿ ಕೇಂದ್ರ ಸರ್ಕಾರ ದೇಶದ ಜನತೆಗೆ ಬಂಪರ್ ಕೊಡುಗೆ ನೀಡಿದ್ದು, ದೇಶಾದ್ಯಂತ ಇಂದಿನಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 2 ರೂಪಾಯಿಗಳಷ್ಟು ಕಡಿಮೆಯಾಗಲಿದೆ. ಇಂದು ಬೆಳಗ್ಗೆಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಬೆಲೆ ಇಳಿಕೆಯ ಬಗ್ಗೆ ಟ್ವೀಟ್​ ಮಾಡಿದ್ದು, ‘ತೈಲ ಮಾರುಕಟ್ಟೆ ದೇಶದಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯನ್ನು ಪರಿಷ್ಕರಿಸುವುದಾಗಿ ತಿಳಿಸಿವೆ. ನೂತನ ಬೆಲೆ ಮಾರ್ಚ್​ 15, 2024 ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರುತ್ತದೆ. ಬೆಲೆ ಕಡಿತವು ಗ್ರಾಹಕರ ವೆಚ್ಚವನ್ನು ಭರಿಸುತ್ತದೆ. ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡುತ್ತದೆ. ಡಿಸೇಲ್ ಮತ್ತು ಪೆಟ್ರೋಲ್​​ನಲ್ಲಿ ಚಲಿಸುವ 58 ಲಕ್ಷ ಸರಕು ವಾಹನಗಳು, 6 ಕೋಟಿ ಕಾರುಗಳು, 27 ಕೋಟಿ ದ್ವೀಚಕ್ರ ವಾಹನಗಳಿವೆ’ ಎಂದು ಹೇಳಿದೆ.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...