Wednesday, January 28, 2026

ಪಿಲಾತಬೆಟ್ಟು ವ್ಯ. ಸೇ.ಸ. ಸಂಘದಿಂದ ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರಕ್ಕೆ ಲ್ಯಾಪ್‌ಟಾಪ್ ಕೊಡುಗೆ  

ಬಂಟ್ವಾಳ: ಬಂಟ್ವಾಳ ತಾಲೂಕು ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೋವಿಡ್-೧೯ ವಿರುದ್ಧ ಕಾರ್ಯ ನಿರ್ವಹಿಸಲು ಲಸಿಕೆ ವಿತರಣೆ ಶಿಬಿರದಲ್ಲಿ  ಕ್ಷಿಪ್ರ ನೊಂದಾವಣೆಗಾಗಿ ಲ್ಯಾಪ್‌ಟಾಪ್ ವಿತರಣ ಕಾರ್ಯಕ್ರಮ ಪ್ರಾ.ಆ.ಕೇಂದ್ರದಲ್ಲಿ ಮಂಗಳವಾರ ನಡೆಯಿತು.

ಸಂಘದ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣ ಉಡುಪ ಅವರು ಲ್ಯಾಪ್ ಟಾಪ್ ವಿತರಿಸಿ, ಕೊರೋನಾ ಸಂಕಷ್ಟದ ಕಾಲದಲ್ಲಿ ಜನರ ಪ್ರಾಣ ರಕ್ಷಣೆ ಮಾಡುವಲ್ಲಿ ಆಸ್ಪತ್ರೆಯ ವೈದ್ಯರು, ಸಿಬಂದಿಗಳ ಉತ್ತಮ ಸೇವೆ ಅಭಿನಂದನೀಯ ಎಂದು ಹೇಳಿದರು.

ಪ್ರಾ.ಆ.ಕೇಂದ್ರದ ವೈದ್ಯಾಽಕಾರಿ ಡಾ| ಸತೀಶ್ ಎಂ. ಸಿ. ಅವರು ಮಾತನಾಡಿ, ಕೊರೊನಾ ವಾರಿಯರ್ಸ್‌ರನ್ನು ಗುರುತಿಸಿ ಗೌರವಿಸಿದ್ದಲ್ಲದೆ, ಆರೋಗ್ಯ ರಕ್ಷಣೆಗಾಗಿ ಆಸ್ಪತ್ರೆಗೆ ವಿವಿಧ ಕೊಡುಗೆಗಳನ್ನು ನೀಡಿದ ಸಹಕಾರಿ ಸಂಘದ ಕಾರ್ಯ ಶ್ಲಾಘನೀಯ  ಎಂದು ಹೇಳಿದರು.

ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ವೈದ್ಯ ಡಾ.ರಿತೇಶ್ ಶೆಟ್ಟಿ, ಸಹಕಾರಿ  ಸಂಘದ ಉಪಾಧ್ಯಕ್ಷ ಉಮೇಶ್ ಪೂಜಾರಿ, ನಿರ್ದೇಶಕರಾದ ಬೂಬ ಸಪಲ್ಯ, ಸುಂದರ ನಾಯ್ಕ, ಸೀತಾರಾಮ ಶೆಟ್ಟಿ ಸೇವಾ, ಸಂತೋಷ್ ಕುಮಾರ್ ಶೆಟ್ಟಿ, ನಾರಾಯಣ ಪೂಜಾರಿ, ಚಂದ್ರಶೇಖರ ಹೆಗ್ಡೆ, ಪಿ.ಎಂ.ಪ್ರಭಾಕರ,ದಿನೇಶ್ ಮೂಲ್ಯ, ಶಿವಯ್ಯ, ಸಂಘದ ಸಿಬಂದಿ ದೀಕ್ಷಿತ್, ಕಿರಿಯ ಆರೋಗ್ಯ ಸಹಾಯಕಿಯರು ಹಾಗೂ ಸಿಬಂದಿ ವರ್ಗ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಾಹಣಾಽಕಾರಿ ಮಂಜಪ್ಪ ಮೂಲ್ಯ ಸ್ವಾಗತಿಸಿದರು. ಆರೋಗ್ಯ ಸಹಾಯಕ ಅನ್ವರ್ ಪಾಷಾ ವಂದಿಸಿದರು.

More from the blog

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...

ಸಜೀಪ : ಜ.28, 29,30ರಂದು ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್

ಬಂಟ್ವಾಳ : ಜಲಾಲಿಯ್ಯಾ ಜುಮಾ ಮಸ್ಜಿದ್, ಚಟ್ಟೆಕ್ಕಲ್, ಸಜಿಪ ಇದರ ಆಶ್ರಯದಲ್ಲಿ ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್ ಬುರ್ದಾ ಮಜ್ಲಿಸ್ ಜಿಸ್ತಿಯಾ ಖುತ್‌ಬಿಯತ್ ಜ.28, 29,30 ರಂದು ಜಲಾಲಿಯ್ಯ ಜುಮಾ ಮಸೀದಿ...

ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ – ಒಡಿಯೂರುಶ್ರೀ

ವಿಟ್ಲ: ಸದೃಢ ದೇಶ ನಿರ್ಮಾಣದಲ್ಲಿ ಸೈನಿಕರ ಪರಿಶ್ರಮ, ತ್ಯಾಗ ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ. ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಒಡಿಯೂರು ರಾಜಾಂಗಣದಲ್ಲಿ...

ವಿಟ್ಲ ಪಡ್ನೂರು : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ವಿಟ್ಲ: ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪವನ್ನು ಬದಲಾಯಿಸಿದ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ವಿಟ್ಲ ಪಡ್ನೂರು ಗ್ರಾಮ...