Wednesday, January 28, 2026

ಪಿಲಾತಬೆಟ್ಟುವಿನಲ್ಲಿ ಬಿಜೆಪಿ ಮತಯಾಚನೆ ಬಿಜೆಪಿ ಗೆಲುವು ನಿಶ್ಚಿತ: ತುಂಗಪ್ಪ ಬಂಗೇರ

ಬಂಟ್ವಾಳ: ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರ ಪರವಾಗಿ ಜಿ.ಪಂ ಸದಸ್ಯ ಎಂ. ತುಂಗಪ್ಪ ಬಂಗೇರ ಅವರು ಪಿಲಾತಬೆಟ್ಟು ಗ್ರಾಮದಲ್ಲಿ ಮಂಗಳವಾರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷಗಳ ಕೇಂದ್ರದ ನರೇಂದ್ರ ಮೋದಿಯವರ ಜನಪರ ಆಡಳಿತದಿಂದಾಗಿ ಈ ಬಾರಿಯೂ ಬಿಜೆಪಿ ಗೆಲುವು ನಿಶ್ಚಿತವಾಗಿದೆ. ಶಾಂತಿ ಸಾಮರಸ್ಯದ ಭಯಮುಕ್ತ ಸಮಾಜದ ನಿರ್ಮಾಣಕ್ಕಾಗಿ ಈ ಬಾರಿ ಬಿಜೆಪಿಗೆ ಮತ ನೀಡ ಬೇಕೆಂದು ಅವರು ಮನವಿ ಮಾಡಿದರು.
ಬಿಜೆಪಿ ಪ್ರಮುಖರಾದ ಚಂದ್ರಶೇಖರ ಶೆಟ್ಟಿ ಕುಮಂಗಿಲ ಮತ್ತು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

More from the blog

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...

ಸಜೀಪ : ಜ.28, 29,30ರಂದು ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್

ಬಂಟ್ವಾಳ : ಜಲಾಲಿಯ್ಯಾ ಜುಮಾ ಮಸ್ಜಿದ್, ಚಟ್ಟೆಕ್ಕಲ್, ಸಜಿಪ ಇದರ ಆಶ್ರಯದಲ್ಲಿ ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್ ಬುರ್ದಾ ಮಜ್ಲಿಸ್ ಜಿಸ್ತಿಯಾ ಖುತ್‌ಬಿಯತ್ ಜ.28, 29,30 ರಂದು ಜಲಾಲಿಯ್ಯ ಜುಮಾ ಮಸೀದಿ...

ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ – ಒಡಿಯೂರುಶ್ರೀ

ವಿಟ್ಲ: ಸದೃಢ ದೇಶ ನಿರ್ಮಾಣದಲ್ಲಿ ಸೈನಿಕರ ಪರಿಶ್ರಮ, ತ್ಯಾಗ ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ. ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಒಡಿಯೂರು ರಾಜಾಂಗಣದಲ್ಲಿ...

ವಿಟ್ಲ ಪಡ್ನೂರು : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ವಿಟ್ಲ: ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪವನ್ನು ಬದಲಾಯಿಸಿದ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ವಿಟ್ಲ ಪಡ್ನೂರು ಗ್ರಾಮ...