Thursday, January 29, 2026

ಪಿಲಾತಬೆಟ್ಟು ಗ್ರಾ.ಪಂ‌.ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ರಾಜೇಶ್ ನಾಯ್ಕ್

ಬೆಳೆಯುತ್ತಿರುವ ಪುಂಜಾಲಕಟ್ಟೆ ಗೆ ಈಗಾಗಲೇ 12.44 ಕೋಟಿ ವೆಚ್ಚದಲ್ಲಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಾಗಿದೆ.ಹೆದ್ದಾರಿ ಯನ್ನು ಕೂಡ ದ್ವಿಪಥವಾಗಿ ಅಭಿವೃದ್ಧಿ ಪಡಿಸಲಾಗಿದ್ದು, ಭವಿಷ್ಯದ ಲ್ಲಿ ಪುಂಜಾಲಕಟ್ಟೆ ಸರ್ವಾಂಗೀಣ ಅಭಿವೃದ್ಧಿಗೊಳ್ಳಲಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಅವರು ಪಿಲಾತಬೆಟ್ಟು ಗ್ರಾ.ಪಂ‌.ವ್ಯಾಪ್ತಿಯಲ್ಲಿ ಸುಮಾರು 8 ಕೋಟಿ ರೂ.ಗಿಂತಲೂ ಅಧಿಕ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಬಳಿಕ ನೂತನವಾಗಿ ನಿರ್ಮಾಣ ಮಾಡಲಾದ ಪಿಲಾತಬೆಟ್ಟು ಗ್ರಾ.ಪಂ.ಸಭಾಂಗಣವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಕಳೆದ ನಾಲ್ಕು ವರ್ಷ ಹತ್ತು ತಿಂಗಳಿನಲ್ಲಿ ತಾಲೂಕಿನ ಪ್ರತಿ ಗ್ರಾಮದಲ್ಲಿ ಯೂ ಮಾಡಿದ ಅಭಿವೃದ್ಧಿ ಕಾರ್ಯಗಳು ನನಗೆ ತೃಪ್ತಿ ತಂದಿದೆ.
ಪಿಲಾತಬೆಟ್ಟು ಗ್ರಾಮದಲ್ಲಿ ಬೇಡಿಕೆಯ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗಿದೆ. ಜಿ.ಪಂ.ಮಾಜಿ ಸದಸ್ಯ ತುಂಗಪ್ಪ ಬಂಗೇರ ಅವರ ನಿರಂತರ ಹೋರಾಟದ ಫಲವಾಗಿ ಪುಂಜಾಲಕಟ್ಟೆಯಲ್ಲಿ ವ್ಯವಸ್ಥಿತವಾದ ಆಸ್ಪತ್ರೆ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಲಾಗಿದೆ,ಇಲ್ಲಿನ ಪ್ರತಿ ಅಭಿವೃದ್ಧಿ ಕಾರ್ಯಗಳ ಹಿಂದೆ ಅವರ ಪ್ರೇರಣೆ ಶಕ್ತಿ ಇದ್ದು,ಅವರಿಗೆ ವಿಶೇಷವಾದ ಅಭಿನಂದನೆ ಸಲ್ಲಬೇಕು ಎಂದರು.

ಪಿಲಾತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರ್ಷಿಣಿಪುಷ್ಪಾನಂದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಜಿ.ಪಂ.ಮಾಜಿ ಸದಸ್ಯ ತುಂಗಪ್ಪ ಎಂ.ಬಂಗೇರ,ಉಪಾಧ್ಯಕ್ಷ ಲಕ್ಮೀನಾರಾಯಣ, ಸದಸ್ಯರಾದ ನೆಲ್ವಿಸ್ಟರ್ ಪಿಂಟೋ,ಕಾಂತಪ್ಪ ಕರ್ಕೇರ, ಲೀಲಾವತಿ ಶೆಟ್ಟಿ, ವನಿತಾ, ಶಾರದ, ಮಾಜಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಪಿಡಿಒ ಯಮನಪ್ಪ ಕೊರವರ,ಲೆಕ್ಕಾಧಿಕಾರಿ ಬಾಲಕೃಷ್ಣ ಪೂಜಾರಿ,ಸಂಜೀವಿನಿ ಮೇಲ್ವಿಚಾರಕಿ ನಳಿನಾಕ್ಷಿ ಮತ್ತು ಗ್ರಾ.ಪಂ. ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಿಲಾತಬೆತಟ್ಟು ಗ್ರಾ.ಪಂ.ನ ಘನತ್ಯಾಜ್ಯ ಘಟಕ, ಹಿಂದೂ ರುದ್ರ ಭೂಮಿ, ವಿವಿಧ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ,ಕಲ್ಲಬೆಟ್ಟು ದುರ್ಗಾಪರಮೇಶ್ವರಿ ದೇವಸ್ಥಾನ ದೇವಸ್ಥಾನದ ತಡೆಗೋಡೆ ಶಿಲಾನ್ಯಾಸ ನೆರವೇರಿಸಲಾಯಿತು.

More from the blog

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...

ಕೊಳ್ನಾಡು: ಕಾಲುಜಾರಿ ಬಾವಿಗೆ ಬಿದ್ದು ಕೃಷಿಕ ಸಾವು

ವಿಟ್ಲ: ದಾರಿ ಬದಿಯ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಕೃಷಿಕ ಕೊಳ್ನಾಡು ಗ್ರಾಮದ ಸಾಲೆತ್ತೂರು ಕೋಡಿ ನಿವಾಸಿ ಕೃಷ್ಣಪ್ಪ ಪೂಜಾರಿ(70) ಮೃತ ಪಟ್ಟಿದ್ದಾರೆ. ಮಂಗಳವಾರ ಸಂಜೆ ಎಂದಿನಂತೆ ಸಾಲೆತ್ತೂರು ಪೇಟೆಗೆ ಹೋಗಿ ಹಿಂತಿರುಗಿ ಬರುವಾಗ...

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...