Friday, January 30, 2026

ಪಿಲಾತಬೆಟ್ಟು ವ್ಯ.ಸೇ.ಸ.ಸಂಘ ಚುನಾವಣೆ ಸಹಕಾರ ಭಾರತಿ ಬೆಂಬಲಿತ ಸದಸ್ಯರ ಆಯ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕು ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರ ಸಂಘ ಪುಂಜಾಲಕಟ್ಟೆ ಇದರ ಆಡಳಿತ ಮಂಡಳಿಗೆ ಚುನಾವಣೆಯು ಜ.25ರಂದು ಸಂಘದ ಕಚೇರಿ ಕಟ್ಟಡದಲ್ಲಿ ನಡೆಯಿತು.
ಸಹಕಾರ ಭಾರತಿ ಬೆಂಬಲಿತ, ದ.ಕ. ಮತ್ತು ಉಡುಪಿ ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷ ಕೆ. ಲಕ್ಷ್ಮಿ ನಾರಾಯಣ ಉಡುಪ ಮತ್ತು ಜಿ.ಪಂ.ಸದಸ್ಯ ಎಂ. ತುಂಗಪ್ಪ ಬಂಗೇರ ಅವರ ನೇತೃತ್ವದ ಸ್ಫರ್ಧಿಗಳು ಜಯಗಳಿಸಿದ್ದು, ಆಡಳಿತ ಮಂಡಳಿಗೆ ಆಯ್ಕೆಯಾಗಿದ್ದಾರೆ.
ಒಟ್ಟು 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 26 ಮಂದಿ ಅಭ್ಯರ್ಥಿಗಳು ಸ್ಫರ್ಧಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಡುವೆ ನೇರ ಸರ್ಧೆ ನಡೆದಿತ್ತು. ಈ ಹಿಂದೆ ಕಳೆದ 30 ವರ್ಷಗಳಿಂದ ನಿರಂತರ ಬಿಜೆಪಿ ಬೆಂಬಲಿತ ಸದಸ್ಯರು ಆಡಳಿತ ನಡೆಸಿದ್ದು, ಈ ಬಾರಿಯೂ ಆಡಳಿತವನ್ನು ತನ್ನ ತೆಕ್ಕೆಗೆ ಪಡೆದುಕೊಂಡಿದೆ.
ಸಾಮಾನ್ಯ ಸ್ಥಾನದಿಂದ ಬೂಬ ಸಪಲ್ಯ, ಸೀತಾರಾಮ ಶೆಟ್ಟಿ, ಚಂದ್ರಶೇಖರ ಹೆಗ್ಡೆ, ನಾರಾಯಣ ಪೂಜಾರಿ, ಸಂತೋಷ್ ಕುಮಾರ್ ಶೆಟ್ಟಿ, ಲಕ್ಷ್ಮಿ ನಾರಾಯಣ ಉಡುಪ, ಉಮೇಶ್ ಪೂಜಾರಿ, ಪ್ರಭಾಕರ ಪಿ. ಎಂ., ಮಹಿಳಾ ಸ್ಥಾನದಿಂದ ಹರ್ಷಿಣಿ, ಸರೋಜಾ ಡಿ. ಶೆಟ್ಟಿ, ಪ.ಜಾತಿ ಸ್ಥಾನದಿಂದ ಶಿವಯ್ಯ, ಪ. ಪಂಗಡದಿಂದ ಸುಂದರ ನಾಯ್ಕ, ಸಾಲಗಾರರಲ್ಲದ ಸ್ಥಾನದಿಂದ ದಿನೇಶ್ ಮೂಲ್ಯ ಅವರು ಆಯ್ಕೆಯಾಗಿದ್ದಾರೆ.
ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿಯ ಅಧಿಕಾರಿ ಎನ್. ಜೆ. ಗೋಪಾಲ್ ಅವರ ನೇತೃತ್ವದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು.

More from the blog

9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿಗೆ ಪ್ರಭಾಕರ ಪ್ರಭು ಮನವಿ 

ಬಂಟ್ವಾಳ : ನೆನೆಗುದಿಗೆ ಬಿದ್ದಿರುವ 9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿ ಮಾಡಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್...

ವಿಟ್ಲ ಜಾತ್ರೆ ಅಂಗಡಿ ಏಲಂನಲ್ಲಿ ಭಾರೀ ಅವ್ಯವಹಾರದ ದೂರು..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಅಂಗಡಿ ಏಲಂನ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಕುತ್ಯಾಡಿ ನಿವಾಸಿ ಲಕ್ಷ್ಮೀಶ ಕೆ. ಎಂಬವರು ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದಾರೆ. ಜಾತ್ರೆಗೆ ಸಂತೆ...

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...