Friday, June 27, 2025

ಸ್ಯಾನಿಟೈಸರ್ ಬದಲು ಬಾಟಲಿಯೊಳಗೆ ಪಿನಾಯಿಲ್

ಬಂಟ್ವಾಳ: ಕೊರೊನಾ ಸೊಂಕು ದೇಶದಲ್ಲಿ ಹರಡುವ ಲಕ್ಷಣಗಳು ಕಂಡು ಬಂದ ಕೂಡಲೇ ಎಲ್ಲಾ ವ್ಯವಹಾರ ಕೇಂದ್ರ ಗಳಲ್ಲಿ ಹಾಗೂ ಸರಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಸ್ಯಾನಿಟೈಸರ್ ಇಡುವಂತೆ ಸರಕಾರ ಅದೇಶ ನೀಡಿತ್ತು.

ಸ್ಯಾನಿಟೈಸರ್ ಬಳಸದೆ ವ್ಯವಹಾರ ಕೇಂದ್ರ ದ ಒಳಗೆ ಹೋಗುವಂತಿಲ್ಲ ಮತ್ತು ಕಡ್ಡಾಯವಾಗಿ ಸ್ಯಾನಿಟೈಸರ್ ಪ್ರತಿಯೊಂದು ಕಚೇರಿಯ ಲ್ಲಿಯೂ ಇರಲೇಬೇಕು ಎಂಬ ತಾಕೀತು ಸರಕಾರ ಮಾಡಿದೆ.
ಆದರೆ ಇಲ್ಲಿ ಒಂದು ಕಡೆ ಬ್ಯಾಂಕಿನ ಎ.ಟಿ.ಎಂ.ಕೇಂದ್ರದೊಳಗೆ ಹಣ ಪಡಯಲು ಹೋಗುವವರಿಗೆ ಏನು ಇಟ್ಟಿದ್ದಾರೆ ಗೊತ್ತಾ?
ಸ್ಯಾನಿಟೈಸರ್ ಬದಲು ಬಾಟಲಿಯೊಳಗೆ ಪಿನಾಯಿಲ್ ತುಂಬಿಸಿಟ್ಟಿದ್ದಾರೆ ಎಂದು ಗ್ರಾಹಕರು ಆರೋಪ ವ್ಯಕ್ತಪಡಿಸಿದ್ದಾರೆ.
ಮಡಂತ್ಯಾರು ಎಂಬಲ್ಲಿ ಕಾರ್ಯಚರಿಸುತ್ತಿರುವ ಸರಕಾರಿ ಪ್ರಾಯೋಜಿತ ಸಂಸ್ಥೆಯಾದ ಈ ಬ್ಯಾಂಕ್ ಗೆ ಸಂಬಂಧಿಸಿದ ಎ.ಟಿ.ಎಂ.ಕೇಂದ್ರದೊಳಗೆ ಹಣ ಪಡೆಯಲು ಅಗಮಿಸುವ ಗ್ರಾಹಕರು ಸ್ಯಾನಿಟೈಸರ್ ಎಂದು ಕೈಗೆ ಹಾಕಿಕೊಂಡರೆ ಅದು ಪಿನಾಯಿಲ್ ಅಗಿದೆ ಎಂದು ಗ್ರಾಹಕರು ಆರೋಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಚೇರಿಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಇವರ ಆರೋಪವಾಗಿದೆ.

ಈ ಬಗ್ಗೆ ಸ್ಥಳೀಯ ಆಡಳಿತ ಗಮನಹರಿಸಿ ಅದನ್ನು ಕೈಗಳಿಗೆ ಹಚ್ಚಬಹುದೇ ಎಂಬುದನ್ನು ಸ್ಪಷ್ಟಪಡಿಸಬೇಕಾಗಿದೆ

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...