Saturday, June 28, 2025

ಎಲ್ಲಾ ರಾಜ್ಯದ ಸಿಎಂಗಳ ಜತೆ ಇಂದು ಪ್ರಧಾನಿ ಸಭೆ

ನವದೆಹಲಿ: ಲಾಕ್‌ಡೌನ್‌ 3.O ಕೊನೆಯ ವಾರಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸೋಮವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆಗೆ ವೀಡಿಯೋ ಕಾನ್ಫರೆನ್ಸ್‌ ನಡೆಸಲಿದ್ದಾರೆ. ಒಂದನೇ ಹಂತದ ಲಾಕ್ ಡೌನ್ ಮಾ. 24ರಂದು ಆರಂಭವಾದ ಬಳಿಕ ಸಿಎಂಗಳ ಜತೆ ಪ್ರಧಾನಿ ನಡೆಸುತ್ತಿರುವ ಐದನೇ ಸಭೆ ಇದು.

ಮೇ 17ರ ಅನಂತರ ಲಾಕ್‌ಡೌನ್‌ ಸಂಪೂರ್ಣವಾಗಿ ತೆರವು ಮಾಡಬೇಕಾದರೆ ಕೈಗೊಳ್ಳಬೇಕಾದ ನಿರ್ಧಾರಗಳು ಮತ್ತು ಅಳವಡಿಸಿಕೊಳ್ಳಬೇಕಾದ ಮಾರ್ಗಸೂಚಿಗಳು ಅಥವಾ ಲಾಕ್‌ಡೌನ್‌ ಮುಂದುವರೆದರೆ ದೇಶದ ಆರ್ಥಿಕತೆಗೆ ಪೂರಕವಾಗಿ ಸಡಿಲಿಸಬೇಕಿರುವ ನಿರ್ಬಂಧಗಳು, ಕಂಟೈನ್‌ಮೆಂಟ್‌ ವಲಯಗಳ ನಿರ್ವಹಣೆ ಮತ್ತು ಕೆಂಪು ವಲಯಗಳಲ್ಲಿ ಕೈಗೊಳ್ಳಬೇಕಾದ ನಿರ್ಧಾರಗಳು, ವಲಸೆ ಕಾರ್ಮಿಕರ ಸುರಕ್ಷಿತ ಪ್ರಯಾಣ, ವಿದೇಶದಿಂದ ಕರೆತರಲಾಗುತ್ತಿರುವ ಭಾರತೀಯರ ವಿಚಾರಗಳು ಇಂದಿನ ಸಭೆಯಲ್ಲಿ ಚರ್ಚೆಯಾಗಲಿವೆ ಎಂಬ ಮಾಹಿತಿ ಇದೆ.
ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್‌ ಗೌಬಾ ಅವರು ಎಲ್ಲ ರಾಜ್ಯ ಸರಕಾರಗಳ ಪ್ರಧಾನ ಕಾರ್ಯದರ್ಶಿಗಳೊಂದಿಗೆ ರವಿವಾರ ಒಂದು ಸುತ್ತಿನ ಸಭೆ ನಡೆಸಿದ್ದಾರೆ. ರಾಜ್ಯ ಸರಕಾರಗಳ ಹಿರಿಯ ಅಧಿಕಾರಿಗಳ ಜತೆಗೆ ಎರಡು ಬಾರಿ ಸಭೆ ನಡೆಸಲಾಗಿದ್ದು, ಈ ಸಂದರ್ಭ ಅವರೆಲ್ಲ ಆರ್ಥಿಕ ಚಟುವಟಿಕೆಗಳನ್ನು ಪುನರಾರಂಭಿಸುವ ಬಗ್ಗೆ ಒಲವು ತೋರಿದ್ದಾರೆ ಎನ್ನಲಾಗಿದೆ. ಮೇ 17ರ ಅನಂತರ ಕೋವಿಡ್ -19 ನಿಯಂತ್ರಣ ಮತ್ತು ಆರ್ಥಿಕ ಪುನಶ್ಚೇತನ – ಈ ಎರಡೂ ವಿಚಾರಗಳನ್ನು ಸರಿದೂಗಿಸಿಕೊಂಡು ಹೋಗುವಂಥ ಕಾರ್ಯತಂತ್ರವನ್ನು ರೂಪಿಸುವ ಬಗ್ಗೆ ಹೆಚ್ಚಿನ ರಾಜ್ಯಗಳು ಒಲವು ತೋರಿವೆ ಎನ್ನಲಾಗಿದೆ. ಕೆಂಪು ವಲಯಗಳನ್ನು ಕೇಂದ್ರ ಸರಕಾರವೇ ಗುರುತಿಸಬೇಕು. ಆ ವಲಯ ಬಿಟ್ಟು ಉಳಿದ ಎಲ್ಲಾ ವಲಯಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನಡೆಸುವಂಥ ಮಾರ್ಗಸೂಚಿ ನೀಡಬೇಕು ಎಂಬ ನಿರ್ಧಾರಕ್ಕೆ ವಿವಿಧ ರಾಜ್ಯ ಸರಕಾರಗಳು ಬಂದಿವೆ ಎನ್ನಲಾಗಿದೆ. ಸೋಂಕು ತೀವ್ರವಾಗಿರುವ ರಾಜ್ಯಗಳಿಗೆ ಕೇಂದ್ರ ತಂಡ ಕಳುಹಿಸುವ ಕುರಿತು ನಿರ್ಧಾರ ಹೊರಬೀಳಲಿದೆ.

ಜನ ಹೆಚ್ಚು ಸೇರಲು ಕಾರಣವಾಗುವಂಥ ಚಟುವಟಿಕೆಗಳಾದ ಸಿನೆಮಾ ಹಾಲ್‌, ಮಾಲ್‌ಗ‌ಳು, ಜಾತ್ರೆಗಳು, ಸಂಘ-ಸಂಸ್ಥೆಗಳ ಸಮಾರಂಭಗಳು, ಖಾಸಗಿ ಸಮಾರಂಭಗಳ ಮೇಲಿನ ನಿರ್ಬಂಧಗಳನ್ನು ಮುಂದುವರಿಸುವ ಬಗ್ಗೆ ಎಲ್ಲ ರಾಜ್ಯ ಸರಕಾರಗಳು ಒಲವು ತೋರಿವೆ. ರಮ್ಜಾನ್‌ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡುವುದಿಲ್ಲ ಎಂದು ತೆಲಂಗಾಣ ಸರಕಾರ ಈಗಾಗಲೇ ಪ್ರಕಟಿಸಿದೆ. ಇಂಥ ನಿರ್ಧಾರಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗಬಹುದು ಎಂಬ ಮಾಹಿತಿಗಳು ಇವೆ.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...