Friday, June 27, 2025

‘ಪ್ರಧಾನ ಮಂತ್ರಿ ಅನ್ನ ಯೋಜನೆ ವಿಸ್ತರಣೆ’ ಪ್ರಧಾನಿ ಮೋದಿ ಯಿಂದ ಘೋಷಣೆ

ನವದೆಹಲಿ:  ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮುಂದುವರಿಯಲಿದ್ದು, ನವೆಂಬರ್ ಅಂತ್ಯದವರೆಗೆ ಉಚಿತ ಪಡಿತರ ವಿತರಣೆ ಆಗಲಿದೆ ಎಂದು ಪ್ರಧಾನಿ ಮಂತ್ರಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿಸಿ ಹೇಳಿದ್ದಾರೆ.

ಇದರಿಂದ 80 ಕೋಟಿಯಷ್ಟು ಬಡ ಜನರಿಗೆ ಅನುಕೂಲವಾಗಲಿದ್ದು, 5 ಕೆ.ಜಿ ಅಕ್ಕಿ ಅಥವಾ ಗೋಧಿಯೊಂದಿಗೆ ಬೇಳೆಯನ್ನು ಉಚಿತವಾಗಿ ಸರ್ಕಾರ ನೀಡಲಿದೆ. ಒಂದು ರಾಷ್ಟ್ರ ಒಂದು ರೇಷನ್ ಕಾರ್ಡ್ ಯೋಜನೆ ಜಾರಿಯಾಗಿದ್ದು, ಬಡ ಕುಟುಂಬದ ಪ್ರತಿಯೊಬ್ಬರಿಗೂ ನವೆಂಬರ್ ಅಂತ್ಯದವರೆಗೆ ಪಡಿತರ ಜಾರಿಯಾಗಲಿದೆ ಎಂದು ಹೇಳಿದ್ದಾರೆ.

ಇದರೊಂದಿಗೆ ಜೂನ್ 1 ರಂದು `ಅನ್ಲಾಕ್ 1 ‘ನಂತರ ವೈಯಕ್ತಿಕ ಮತ್ತು ಸಾಮಾಜಿಕ ನಡವಳಿಕೆಯಲ್ಲಿ ಜನರ ನಿರ್ಲಕ್ಷ್ಯ ಹೆಚ್ಚುತ್ತಿದೆ. ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟಲು ಜನ ಎಚ್ಚರಿಕೆ ವಹಿಸಬೇಕು, ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಮಳೆಗಾಲದಲ್ಲಿ ಕೆಮ್ಮು ಮತ್ತು ಶೀತದ ಸಾಕಷ್ಟು ಎಚ್ಚರಿಕೆ ವಹಿಸಿ ಎಂದು ಕರೆ ನೀಡಿದ್ದಾರೆ.

ಕೊರೋನ ವೈರಸ್ ಕಾರಣದಿಂದಾಗಿ ನಾವು ಸಾವಿನ ಪ್ರಮಾಣವನ್ನು ತುಲನೆ ಮಾಡಿದರೆ ಭಾರತವು ವಿಶ್ವದ ಹಲವು ದೇಶಗಳಿಗಿಂತ ಉತ್ತಮ ಸ್ಥಾನದಲ್ಲಿದೆ. ಸಮಯೋಚಿತ ಲಾಕ್‌ಡೌನ್ ಮತ್ತು ಇತರ ನಿರ್ಧಾರಗಳು ಭಾರತದ ಲಕ್ಷಾಂತರ ಜನರ ಜೀವವನ್ನು ಉಳಿಸಿವೆ “ಎಂದು ಅವರು ಹೇಳಿದ್ದಾರೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...