Friday, January 30, 2026

ನಾಳೆ ರಾತ್ರಿ 8ಕ್ಕೆ: ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮಾತು

ನವ ದೆಹಲಿ: ಕೊರೋನಾ ವೈರಸ್ ಭೀತಿ ಹಿನ್ನೆಲೆ ಏ.14ರಂದು ದೇಶಾದ್ಯಂತ ಲಾಕ್‌ಡೌನ್ ಕೊನೆಗೊಳ್ಳಲಿದೆಯೇ ಅಥವಾ ಲಾಕ್‌ಡೌನ್‌ ಅವಧಿ ವಿಸ್ತರಿಸಲಾಗುತ್ತದೆಯೇ ಎಂಬ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಅದಕ್ಕೂ ಮೊದಲು ಪ್ರಧಾನಿ ರಾಜ್ಯದ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಿದ್ದಾರೆ.

ಹಲವಾರು ಮೂಲಗಳ ಪ್ರಕಾರ ಲಾಕ್‌ಡೌನ್ ವಿಸ್ತರಣೆಯಾಗಲಿದೆ ಎನ್ನಲಾಗುತ್ತಿದೆ. ಲಾಕ್‌ಡೌನ್ ವಿಸ್ತರಿಸಲ್ಪಟ್ಟರೂ ಅದರಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗುತ್ತದೆ ಎನ್ನಲಾಗುತ್ತಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಅಂತಾರಾಜ್ಯ ಓಡಾಟದ ಮೇಲಿನ ನಿರ್ಬಂಧ ಹೀಗೆಯೇ ಮುಂದುವರಿಯಲಿದ್ದು, ಶಾಲೆ, ಕಾಲೇಜು ಹಾಗೂ ದೇವಾಲಯ, ಮಸೀದಿ ಹಾಗೂ ಚರ್ಚ್‌ಗಳೂ ಎಂದಿನಂತೆ ಮುಚ್ಚಲ್ಪಟ್ಟಿರುತ್ತವೆ ಎಂದು ಮೂಲಗಳು ತಿಳಿಸಿದೆ.

More from the blog

9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿಗೆ ಪ್ರಭಾಕರ ಪ್ರಭು ಮನವಿ 

ಬಂಟ್ವಾಳ : ನೆನೆಗುದಿಗೆ ಬಿದ್ದಿರುವ 9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿ ಮಾಡಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್...

ವಿಟ್ಲ ಜಾತ್ರೆ ಅಂಗಡಿ ಏಲಂನಲ್ಲಿ ಭಾರೀ ಅವ್ಯವಹಾರದ ದೂರು..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಅಂಗಡಿ ಏಲಂನ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಕುತ್ಯಾಡಿ ನಿವಾಸಿ ಲಕ್ಷ್ಮೀಶ ಕೆ. ಎಂಬವರು ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದಾರೆ. ಜಾತ್ರೆಗೆ ಸಂತೆ...

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...