Saturday, February 8, 2025

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಬ್ರಹ್ಮಕಲಶೋತ್ಸವ ದೇವಳ ಪ್ರವೇಶ ಅವಧಿಯಲ್ಲಿ ಮಾರ್ಪಾಡು

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಬ್ರಹ್ಮಕಲಶೋತ್ಸವ
ದೇವಳ ಪ್ರವೇಶ ಅವಧಿಯಲ್ಲಿ ಮಾರ್ಪಾಡು.

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಾಳೆ *ಬುಧವಾರ (ಮಾ.13)* ಸಂಭ್ರಮದ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಇದರ ಅಂಗವಾಗಿ ದೇವಸ್ಥಾನದ ಒಳಗೆ ಪೂಜಾ ಕೈಂಕರ್ಯಗಳು ನಡೆಯುವ ಹಿನ್ನೆಲೆಯಲ್ಲಿ ಭಕ್ತರ ದೇಗುಲ ಪ್ರವೇಶ ಸಮಯದಲ್ಲಿ ಕೆಲವೊಂದು ಮಾರ್ಪಾಡು ಮಾಡಲಾಗಿದೆ.
ಬೆಳಗ್ಗೆ 4ರಿಂದ 8.10ರ ವರೆಗೆ ಬ್ರಹ್ಮಕಲಶ ನಡೆಯಲಿರುವುದರಿಂದ ಬೆಳಿಗ್ಗೆ 10 ಗಂಟೆಯ ತನಕ ದೇವಾಲಯದ ಒಳಗೆ ಭಕ್ತರ ಪ್ರವೇಶ ನಿಯಂತ್ರಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆ ತನಕ ದೇವರ ದರ್ಶನಕ್ಕೆ ಮುಕ್ತ ಅವಕಾಶವಿದೆ. ಸಂಜೆ ದೇವರಿಗೆ ರಂಗಪೂಜೆ ನಡೆಯಲಿರುವುದರಿಂದ ಸಂಜೆ 5.30 ರಿಂದ 8.30 ತನಕ ಭಕ್ತರ ಪ್ರವೇಶವನ್ನು ಮತ್ತೆ ನಿಯಂತ್ರಿಸಲಾಗುತ್ತದೆ, ರಾತ್ರಿ8.30ರ ನಂತರ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಭಕ್ತರು ಇದಕ್ಕೆ ಸಂಪೂರ್ಣ ಸಹಕರಿಸಬೇಕೆಂದು ದೇವಳದ ಆಡಳಿತ ಮಂಡಳಿ ಪ್ರಕಟನೆ ತಿಳಿಸಿದೆ.

*ಎಲ್‌ಇಡಿ* *ಅಳವಡಿಕೆ:*

ಬ್ರಹ್ಮಕಲಶೋತ್ಸವದ ಪ್ರಕ್ರಿಯೆಯನ್ನು ವೀಕ್ಷಿಸಲು ಭಕ್ತರಿಗೆ ಅನುಕೂಲವಾಗುವಂತೆ ದೇವಸ್ಥಾನದ ಪರಿಸರದಲ್ಲಿ ಅಲ್ಲಲ್ಲಿ ಒಟ್ಟು 10ಕ್ಕೂ ಅಧಿಕ ಎಲ್‌ಇಡಿ ಸ್ಕ್ರೀನ್ ಗಳನ್ನು ಅಳವಡಿಸಲಾಗಿದೆ.

More from the blog

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ನರ್ಸಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ : ಸಂಸದ ಕ್ಯಾ. ಚೌಟ ಆಗ್ರಹ

ನವದೆಹಲಿ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ...

ಕಾವಳಮೂಡೂರು : ತೆಂಗಿನ ಗಿಡ ವಿತರಣಾ ಕಾರ್ಯಕ್ರಮ

ಬಂಟ್ವಾಳ : ಕಾವಳಮೂಡೂರು ಗ್ರಾಮ ಪಂಚಾಯತಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು ಮಂಗಳೂರು, ಸಿ. ಪಿ. ಸಿ. ಆರ್. ಐ. ಕಾಸರಗೋಡು, ಡೇ- ಎನ್ ಆರ್...