Friday, January 30, 2026

ಪೊಳಲಿಗೆ ಮಾಜಿ ಸಿ.ಎಂ.ಸಿದ್ದರಾಮಯ್ಯ ದಿನೇಶ್ ಗುಂಡೂರಾವ್ ಬೇಟಿ

ಬಂಟ್ವಾಳ:   ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,ಕೆಪಿಸಿಸಿ ಅಧ್ಯಕ್ಷ ದಿನೇಶ್  ಗುಂಡೂರಾವ್   ಅವರು ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳಕ್ಕೆ ರವಿವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.
ದೇವಳದ ಅನುವಂಶಿಕ ಆಡಳಿತ ಮೊಕ್ತೇಸರರಾದ ಅಮ್ಮುಂಜೆಗುತ್ತು ಡಾ.ಮಂಜಯ್ಯ ಶೆಟ್ಟಿ,ಮೊಕ್ತೇಸರರಾದ ತಾರನಾಥ ಆಳ್ವ ಉಳಿಪಾಡಿಗುತ್ತು,ಬ್ರಹ್ಮಕಲಶ ಸಮಿತಿ ಅಧ್ಯಕ್ಷ ,ಶಾಸಕ ಯು.ರಾಜೇಶ್ ನಾಯ್ಕ್ ,ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ,ಮಾಜಿ ಸಚಿವ ರಮಾನಾಥ ರೈ,ಕೃಷ್ಣಕುಮಾರ್ ಪೂಂಜಾ ಫರಂಗಿಪೇಟೆ ರವರು,ಮಾಜಿ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರನ್ನು  ಸ್ವಾಗತಿಸಿದರು.  ಉಗ್ರಾಣ, ದೇವಳದ ವೈಭವ, ಮರದ ಕೆತ್ತನೆಯನ್ನು ವೀಕ್ಷಸಿ ಕಣ್ತುಂಬಿಕೊಂಡು,ಮೆಚ್ಚುಗೆ ವ್ಯಕ್ತಪಡಿಸಿದರು. ಅರ್ಚಕರು  ಪ್ರಾರ್ಥಿಸಿ ಪ್ರಸಾದವಿತ್ತರು.  ಶಾಸಕ ಯು.ರಾಜೇಶ್ ನಾಯ್ಕ್ ಅವರು ದೇವಳದ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಇವರಿಗೆ ದೇವಳದ ಇತಿಹಾಸವನ್ನು ವಿವರಿಸಲಾಯಿತು .  ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಎಂಎಲ್ ಸಿ ಗಳಾದ ಐವಾನ್ ಡಿಸೋಜ. ಹರೀಶ್ ಕುಮಾರ್ ,ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ,  ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಕೃಪಾ ಆಳ್ವ, ಮಮನಪಾ ಸದಸ್ಯಪ್ರವೀಣ್ ಆಳ್ವ ಮೊದಲಾದವರಿದ್ದರು.

More from the blog

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...

ಫೆ.3ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಹಿಳಾ & ಮಕ್ಕಳ ಸಂಭ್ರಮೋತ್ಸವ

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಫೆ.3ರಂದು ಮಂಗಳವಾರ...