Wednesday, July 9, 2025

ಸಾಂಪ್ರದಾಯಿಕ ಉಡುಗೆ ತೊಟ್ಟು ದೇವಸ್ಥಾನ ಪ್ರವೇಶಿಸಿ : ಪೊಳಲಿಯಲ್ಲಿ ನಾಮಫಲಕ

ಇತಿಹಾಸ ಪ್ರಸಿದ್ಧ ಸಾವಿರ ಸೀಮೆಯ ಒಡತಿ ಕಾರಣಿಕ ಶ್ರೀ ಕ್ಷೇತ್ರ ಪೊಳಲಿಯಲ್ಲಿ ವಸ್ತ್ರಸಂಹಿತೆ ಜಾರಿಯಾಗಬೇಕೆಂದು ವಿಶ್ವಹಿಂದುಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಕಳೆದ ಏಪ್ರಿಲ್ ತಿಂಗಳಿನಲ್ಲಿ 3000 ಜನ ಕಾರ್ಯಕರ್ತರು ಪಾದಯಾತ್ರೆ ನಡೆಸಿ ಮನವಿ ಸಲ್ಲಿಸಿದ್ದರು ಅದರಂತೆ ಆದಷ್ಟು ಬೇಗ ವಸ್ತ್ರಸಂಹಿತೆ ನೀತಿ ಜಾರಿಯಾಗಬೇಕೆಂದು ಬಂಟ್ವಾಳ ಪ್ರಖಂಡದ ವತಿಯಿಂದ ದೇವಾಸ್ಥಾನದಲ್ಲಿ ಇಂದು ವಸ್ತ್ರಸಂಹಿತೆ ನೀತಿಯ ಬೋರ್ಡ್ ಅಳವಡಿಸಲಾಯಿತು.

ಪುತ್ತೂರು ಜಿಲ್ಲಾ ಸಂಚಾಲಕರಾದ ಭರತ್ ಕುಮ್ಡೆಲ್, ಜಿಲ್ಲಾ ಸಹ ಸಂಚಾಲಕ್ ಗುರುರಾಜ್ ಬಂಟ್ವಾಳ್, ವಿ.ಹಿಂ.ಪ ಬಂಟ್ವಾಳ ಪ್ರಖಂಡ ಕಾರ್ಯದರ್ಶಿ ಸುರೇಶ್ ಬೆಂಜನಪದವು, ಬಜರಂಗದಳ ಪ್ರಖಂಡ ಸಂಚಾಲಕ್ ಶಿವಪ್ರಸಾದ್ ತುಂಬೆ, ಸಂತೋಷ್ ಕೆ ಸರಪಾಡಿ, ದೀಪಕ್ ಬಂಟ್ವಾಳ್, ಪ್ರಸಾದ್ ಬೆಂಜನಪದವು, ರತೀಶ್ ರಾಮಲ್ ಕಟ್ಟೆ, ಪ್ರವೀಣ್ ಕುಂಟಾಲಪಲ್ಕೆ, ಅಶ್ವತ್ ಪೂಂಜಾಲ್ ಕಟ್ಟೆ, ಪೋಳಲಿ ಖಂಡ ಸಮಿತಿ ಹಾಗೂ ಘಟಕದ ಪ್ರಮುಖರು ಉಪಸ್ಥಿತರಿದ್ದರು.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...