Monday, July 14, 2025

ಕೊರೊನಾ ಪರಿಣಾಮ ಪೊಳಲಿ ವಾರ್ಷಿಕ ಜಾತ್ರೆ ಸರಳವಾಗಿ ನಡೆಯುತ್ತದೆ

ಬಂಟ್ವಾಳ: ಪ್ರತಿವರ್ಷ ಒಂದು ತಿಂಗಳ ಕಾಲ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆಯುವ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೆಯು ಈ ಬಾರಿ ಕೊರೊನಾ ವೈರಸ್ ಆತಂಕದ ಪರಿಣಾಮದಿಂದ ಬಹಳ ಸರಳವಾಗಿ ಶಾಸ್ತ್ರಕ್ಕೆ ಚ್ಯುತಿ ಬಾರದಂತೆ ನಡೆಯಲಿದ್ದು, ಎ. 6ರಂದು ಮೊದಲ ಚೆಂಡು ನಡೆಯಲಿದೆ.

ಜಾತ್ರೆಯು ಕೇವಲ ದೇವಸ್ಥಾನದ ಸಿಬಂದಿ, ಆಡಳಿತ ಮಂಡಳಿಯವರ ಸಮ್ಮುಖದಲ್ಲಿ ನಡೆಯಲ್ಲಿದ್ದು, ಭಕ್ತರಿಗೆ ಭಾಗವಹಿಸಲು ಅವಕಾಶವಿರುವುದಿಲ್ಲ. ಪ್ರತಿವರ್ಷ ಈ ಸಮಯದಲ್ಲಿ ಭಕ್ತರಿಂದ ತುಂಬಿರುತ್ತಿದ್ದ ಪೊಳಲಿ ಕ್ಷೇತ್ರಕ್ಕೆ ಈ ಬಾರಿ ಭಕ್ತರಿಗೆ ಪ್ರವೇಶವಿಲ್ಲ. ಹೊರ ಭಾಗದಲ್ಲೇ ನಿಂತು ದೇವರಿಗೆ ಕೈ ಮುಗಿದು ತೆರಳಬೇಕಿದೆ.

ಎ. 6ರಿಂದ 5 ದಿನಗಳ ಕಾಲ ಚೆಂಡು ನಡೆಯಲಿದ್ದು, ಎ. 11ರಂದು ನಡೆಯಬೇಕಿದ್ದ ಮಹಾರಥೋತ್ಸವ ಕೂಡ ಇರುವುದಿಲ್ಲ. ಈಗಾಗಲೇ ಕ್ಷೇತ್ರದ ಆಡಳಿತ ಮಂಡಳಿ, ಪುರೋಹಿತ ವರ್ಗ ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡು ಸರಳ ರೀತಿಯ ಜಾತ್ರೆ ನಡೆಸುವ ನಿರ್ಧಾರಕ್ಕೆ ಬಂದಿದೆ.

ಕೊರೊನಾ ವೈರಸ್ ಆತಂಕದಿಂದ ಸರಕಾರದ ಆದೇಶದಂತೆ ಸರಳ ರೀತಿಯಲ್ಲಿ ಕೇವಲ ದೇವಸ್ಥಾನದ ಸಿಬಂದಿ, ಆಡಳಿತ ಮಂಡಳಿಯ ಪ್ರಮುಖರ ಉಪಸ್ಥಿತಿಯಲ್ಲಿ ಜಾತ್ರೆ ನಡೆಯಲಿದೆ. ಶಾಸ್ತ್ರಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಪ್ರತಿಯೊಂದು ಕಾರ್ಯಕ್ರಮವನ್ನು ನಡೆಸಿಕೊಂಡು ಹೋಗುವುದಕ್ಕೆ ದೇವರಲ್ಲಿ ಪ್ರಾರ್ಥಿಸಿ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಕ್ಷೇತ್ರದ ತಂತ್ರಿಗಳಾದ ಸುಬ್ರಹ್ಮಣ್ಯ ತಂತ್ರಿಗಳು ತಿಳಿಸಿದ್ದಾರೆ.

More from the blog

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...

ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು ನಡೆಯಲು ಸಾಧ್ಯ- ಮಾಣಿಲಶ್ರೀ

ವಿಟ್ಲ: ನಮ್ಮ ಕಣ್ಣುಗಳಿಗೆ ಕಾಣದಿರುವ ಶಕ್ತಿಯೇ ದೇವರು. ದೇವರನ್ನು ಬಿಟ್ಟು ನಾವು ಯಾವ ಕಾರ್ಯವನ್ನೂ ಮಾಡಿದರೂ ನಿಷ್ಪ್ರಯೋಜಕ. ಉಸಿರು ಇದ್ದಷ್ಟು ದಿನ ಲೋಕಹಿತ ಕಾರ್ಯ ಮಾಡಬೇಕು. ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು...

ನೈಸರ್ಗಿಕ ವಿಪತ್ತುಗಳಿಗೆ ಮೂಲ ಕಾರಣವೆ ಅರಣ್ಯ ನಾಶ : ಮನೋಜ್ ಮಿನೇಜಸ್ 

ಬಂಟ್ವಾಳ: ನೈಸರ್ಗಿಕ ವಿಪತ್ತುಗಳಿಗೆ  ಮೂಲ ಕಾರಣವೆ ಅರಣ್ಯನಾಶ. ಜಲ ನೆಲ ಪ್ರಾಣಿ ಸಂಕುಲಗಳು ದೇವರ ಆಸ್ತಿ ಅವುಗಳನ್ನು ಸರಿಯಾಗಿ ನಡೆಸುವ ಜವಾಬ್ದಾರಿ ನಮ್ಮದು. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ .ಕಳೆದ 5 ವರ್ಷಗಳಿಂದ...

B.C. ROAD : ಕೆಂಪುಕಲ್ಲು, ಮರಳು ಅಭಾವ : ಬಂಟ್ವಾಳ ಬಿಜೆಪಿ ವತಿಯಿಂದ ಪ್ರತಿಭಟನಾ ಸಭೆ..

ಬಂಟ್ವಾಳ: ಕೆಂಪುಕಲ್ಲು ಕಲ್ಲಿನ ರಾಜಧನವನ್ನು 40 ರೂ.ಗಳಿಂದ 280 ರೂ.ಗಳಿಗೆ ಏರಿಕೆ ಮಾಡಿರುವ ರಾಜ್ಯ ಸರಕಾರವು ಮರಳು ತೆಗೆಯುವ ಕಾನೂನನ್ನೂ ಸರಳಗೊಳಿಸದೆ ಜನರಿಗೆ ಕದಿಯಲು ಪ್ರೇರಣೆ ನೀಡುತ್ತಿದೆ. ಕೆಂಪು ಕಲ್ಲು ಹಾಗೂ ಮರಳಿನ...