Thursday, June 26, 2025

ಪೊಳಲಿಯಲ್ಲಿ ಪೊಲೀಸ್ ಹೊರ ಠಾಣೆ ಉದ್ಘಾಟಿಸಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಪೊಳಲಿಯಲ್ಲಿ ಇಂದು(ನ.16) ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಯವರು ಪೋಲೀಸ್ ಹೊರಠಾಣೆಯನ್ನು ಉದ್ಘಾಟಿಸಿದರು.
ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಗೆ ಸನಿಹ ಬಸ್ ನಿಲ್ದಾಣದ ಬಳಿಯಲ್ಲಿ ಗ್ರಾಮಾಂತರ ಪೋಲೀಸ್ ಠಾಣೆಯ ಪೋಲಿಸ್ ಔಟ್ ಪೋಸ್ಟ್‌ ನ ಉದ್ಘಾಟನೆ ಯನ್ನುವಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕೀ ಹಸ್ತಾಂತರಿಸುವ ಮೂಲಕ ನೆರವೇರಿಸಿದರು.


ಬಳಿಕ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗುವ ನಿಟ್ಟಿನಲ್ಲಿ ಪೊಲೀಸ್ ಔಟ್ ಪೋಸ್ಟ್ ನಿರ್ಮಾಣವಾಗಿರುವುದು ತಂಬಾ ಸಂತಸದ ವಿಚಾರ. ಇದರ ಜೊತೆಗೆ ಪೊಲೀಸರಿಗೂ ಭದ್ರತೆಯನ್ನು ಒದಗಿಸಿದೆ ಎಂದು ಹೇಳಿದರು.

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಾಲಯಕ್ಕೆ ಬರುವ ಭಕ್ತರಿಗೆ ಹೆಚ್ಚು ಭದ್ರತೆಯನ್ನು ಒದಗಿಸಲು ಸಹಾಯವಾಗುವ ನಿಟ್ಟಿನಲ್ಲಿ ಮತ್ತು ಅ ಭಾಗದಲ್ಲಿ ನಡೆಯುವ ಅಪರಾಧಗಳ ಬಗ್ಗೆ ಶೀಘ್ರವಾಗಿ ಮಾಹಿತಿ ಪಡೆಯಲು ಇದು ಸಹಾಯವಾಗುತ್ತದೆ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪೊಳಲಿಗೆ ಹೋಗಿ ಬರಲು ತುಂಬಾ ಸಮಯ ತಗಲುತ್ತದೆ ಮತ್ತು ಪೊಲೀಸರು ಮಳೆಗಾಲದಲ್ಲಿ ಬಸ್ ನಿಲ್ದಾಣದಲ್ಲಿ ನಿಂತುಕೊಳ್ಳಲು ತೊಂದರೆಯಾಗುತ್ತಿತ್ತು. ಈ ಎಲ್ಲಾ ಕಾರಣಗಳಿಗಾಗಿ ಸಾರ್ವಜನಿಕರ ಸಹಾಯದಿಂದ ಮತ್ತು ಗ್ರಾಮಾಂತರ ಠಾಣಾ ಎಸ್.ಐ.ಪ್ರಸನ್ನ ಅವರ ಮುತುವರ್ಜಿಯಿಂದ ಪೋಲೀಸ್ ಹೊರ ಠಾಣೆ ನಿರ್ಮಾಣ ಮಾಡಲಾಗಿದೆ.

ಈ ಸಂದರ್ಭದಲ್ಲಿ ತಾ.ಪಂ. ಸದಸ್ಯ ಯಶವಂತ ಪೊಳಲಿ, ಡಿ.ವೈ.ಎಸ್.ಪಿ. ವೆಲೆಂಟೈನ್ ಡಿ.ಸೋಜ, ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ಬಂಟ್ವಾಳ ಎಸ್.ಐ.ಗಳಾದ .ಪ್ರಸನ್ನ , ಅವಿನಾಶ್, ಸಂಜೀವ ,ರಾಜೇಶ್ ಕೆ.ವಿ.ಕಲೈಮಾರ್ ಉಪಸ್ಥಿತರಿದ್ದರು.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...