Thursday, January 29, 2026

ದೇವಾಡಿಗ ಸಮಾಜದ ವತಿಯಿಂದ ನೂತನ ಷಷ್ಟಿರಥ ಸಮರ್ಪಣೆ

ಬಂಟ್ವಾಳ: ದೇವಾಡಿಗ ಸಮಾಜ ಶ್ರೀ ಪೊಳಲಿ ಷಷ್ಟಿರಥ ಸಮರ್ಪಣಾ ಸಮಿತಿ ಇದರ ವತಿಯಿಂದ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿಗೆ ದೇವಾಡಿಗ ಸಮಾಜದ ವತಿಯಿಂದ ನೂತನ ಷಷ್ಟಿರಥ ಸಮರ್ಪಣೆ ಬುಧವಾರ ನಡೆಯಿತು. ನಾಗೇಶ್ ಬಪ್ಪನಾಡು ಮತ್ತು ಬಳಗದವರಿಂದ ಶಾಸ್ತ್ರೀಯ ನಾಗಸ್ವರ ಕಚೇರಿ ನಡೆಯಿತು. ಬಳಿಕ ಶ್ರೀ ರಾಜರಾಜೇಶ್ವರೀ ಭಜನಾ ಮಂಡಳಿ ಪೊಳಲಿ ಹಾಗೂ ಶ್ರೀ ನಿತ್ಯಾನಂದ ಚಾಮುಂಡಿ ಭಜನಾ ಮಂಡಳಿ ಇವರಿಂದ ಭಜನಾ ಸಂಕೀರ್ತನೆ ನಡೆಯಿತು.

ಬೆಳಿಗ್ಗೆ 11 ಗಂಟೆಯ ಶುಭ ಮುಹೂರ್ತದಲ್ಲಿ ದೇವರ ಬಲಿಯೊಂದಿಗೆ ನೂತನ ಷಷ್ಠಿರಥ ಸಮರ್ಪಣೆ ನಡೆಯಿತು. ಅಪಾರ ಸಂಖ್ಯೆಯಲ್ಲಿ ದೇವಾಡಿಗ ಸಮಾಜದ ಬಂಧುಗಳು ಹಾಗೂ ಕ್ಷೇತ್ರದ ಭಕ್ತರು ಹಾಜರಿದ್ದರು. ಪಲ್ಲಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭ ಬ್ರಹ್ಮರಥ ಸಮಿತಿಯ ಅಧ್ಯಕ್ಷ ರಾಮದಾಸ ಬಂಟ್ವಾಳ್, ಮಾಜಿ ಶಾಸಕ ರುಕ್ಮಯ ಪೂಜಾರಿ, ಮಾಜಿ ಸಚಿವ ನಾಗರಾಜ ಶೆಟ್ಟಿ ಹಾಗೂ ಅನೇಕ ಸಮಾಜದ ಗಣ್ಯರು ಈ ಸಂದರ್ಭ ಉಪಸ್ಥಿತರಿದ್ದರು.

More from the blog

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...

ಕೊಳ್ನಾಡು: ಕಾಲುಜಾರಿ ಬಾವಿಗೆ ಬಿದ್ದು ಕೃಷಿಕ ಸಾವು

ವಿಟ್ಲ: ದಾರಿ ಬದಿಯ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಕೃಷಿಕ ಕೊಳ್ನಾಡು ಗ್ರಾಮದ ಸಾಲೆತ್ತೂರು ಕೋಡಿ ನಿವಾಸಿ ಕೃಷ್ಣಪ್ಪ ಪೂಜಾರಿ(70) ಮೃತ ಪಟ್ಟಿದ್ದಾರೆ. ಮಂಗಳವಾರ ಸಂಜೆ ಎಂದಿನಂತೆ ಸಾಲೆತ್ತೂರು ಪೇಟೆಗೆ ಹೋಗಿ ಹಿಂತಿರುಗಿ ಬರುವಾಗ...

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...