ಬಂಟ್ವಾಳ: ಕೊರೊನೊ ವೈರಸ್ ಭೀತಿಯಿಂದ ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ನಡೆಯುವ ಜಾತ್ರಾ ಮಹೋತ್ಸವಗಳಲ್ಲಿ ಸಾರ್ವಜನಿಕ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಿದೆ ಎಂದು ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ದೇವಸ್ಥಾನದಲ್ಲಿ ಕೇವಲ ದೇವರ ದರ್ಶನ ಹೊರತುಪಡಿಸಿ ಉಳಿದ ಎಲ್ಲಾ ಸೇವೆಯನ್ನು ಮುಂದಿನ ಆದೇಶದವರೆಗೆ ರದ್ದು ಪಡಿಸಿದೆ, ಹಾಗೂ ದೇವಳಕ್ಕೆ ಬರುವ ಸಾರ್ವಜನಿಕರು ತಂಗಲು ಅವಕಾಶ ಇರುವುದಿಲ್ಲ. ದೇವಸ್ಥಾನದಲ್ಲಿ ನಡೆಯುವ ಉತ್ಸವದಲ್ಲಿ ಸಿಬ್ಬಂದಿಗಳು ಮಾತ್ರ ಭಾಗವಹಿಸುವ ಅವಕಾಶ ಎಂದು ಅದೇಶ ಮಾಡಿದ್ದಾರೆ.


