Monday, July 14, 2025

ಅಕ್ರಮ ಗಣಿಗಾರಿಕೆಗೆ ಪೋಲೀಸ್ ದಾಳಿ: ಲಕ್ಷಾಂತರ ರೂ ಮೌಲ್ಯದ ಸೊತ್ತುಗಳು ವಶಕ್ಕೆ

ವಿಟ್ಲ: ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಕೇರಳ ಗಡಿ ಭಾಗದಲ್ಲಿ ಸಾಲೆತ್ತೂರು ಗ್ರಾಮದ ವಾಲ್ತಾಜೆ ಪರಂಬೋಕು ಹೊಳೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ ಸ್ಥಳಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ ಹತ್ತು ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.‌

ಸಾಲೆತ್ತೂರು ಗ್ರಾಮದ ವಾಲ್ತಾಜೆ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರವಾಗಿ ಮರಳು ನಡೆಸಲು ತಯಾರಿ ಮಾಡುತ್ತಿದ್ದ ಬಗ್ಗೆ ದಾಳಿ ನಡೆಸಲಾಗಿದೆ. ಈ ಸಂದರ್ಭ ಸೊತ್ತುಗಳಾದ ಹಿಟಾಚಿ-1, ಡ್ರಜಿಂಗ್ ಮಿಷನ್-1, ಡ್ರಮ್ -08, ಪ್ಲಾಸ್ಟಿಕ್ ಪುಟ್ ಬಾಲ್ -01, ಕಬಿಣ್ಣದ ಪೈಪ್ -01 ಗಳನ್ನು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಎಲ್ಲಾ ಸ್ವತ್ತುಗಳ ಅಂದಾಜು ಮೌಲ್ಯ 10 ಹತ್ತು ಲಕ್ಷ ರೂ. ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣವನ್ನು ಕಾನೂನು ಕ್ರಮದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಸ್ತಾಂತರಿಸಲಾಗಿದೆ.

More from the blog

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...

ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು ನಡೆಯಲು ಸಾಧ್ಯ- ಮಾಣಿಲಶ್ರೀ

ವಿಟ್ಲ: ನಮ್ಮ ಕಣ್ಣುಗಳಿಗೆ ಕಾಣದಿರುವ ಶಕ್ತಿಯೇ ದೇವರು. ದೇವರನ್ನು ಬಿಟ್ಟು ನಾವು ಯಾವ ಕಾರ್ಯವನ್ನೂ ಮಾಡಿದರೂ ನಿಷ್ಪ್ರಯೋಜಕ. ಉಸಿರು ಇದ್ದಷ್ಟು ದಿನ ಲೋಕಹಿತ ಕಾರ್ಯ ಮಾಡಬೇಕು. ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು...

ನೈಸರ್ಗಿಕ ವಿಪತ್ತುಗಳಿಗೆ ಮೂಲ ಕಾರಣವೆ ಅರಣ್ಯ ನಾಶ : ಮನೋಜ್ ಮಿನೇಜಸ್ 

ಬಂಟ್ವಾಳ: ನೈಸರ್ಗಿಕ ವಿಪತ್ತುಗಳಿಗೆ  ಮೂಲ ಕಾರಣವೆ ಅರಣ್ಯನಾಶ. ಜಲ ನೆಲ ಪ್ರಾಣಿ ಸಂಕುಲಗಳು ದೇವರ ಆಸ್ತಿ ಅವುಗಳನ್ನು ಸರಿಯಾಗಿ ನಡೆಸುವ ಜವಾಬ್ದಾರಿ ನಮ್ಮದು. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ .ಕಳೆದ 5 ವರ್ಷಗಳಿಂದ...

B.C. ROAD : ಕೆಂಪುಕಲ್ಲು, ಮರಳು ಅಭಾವ : ಬಂಟ್ವಾಳ ಬಿಜೆಪಿ ವತಿಯಿಂದ ಪ್ರತಿಭಟನಾ ಸಭೆ..

ಬಂಟ್ವಾಳ: ಕೆಂಪುಕಲ್ಲು ಕಲ್ಲಿನ ರಾಜಧನವನ್ನು 40 ರೂ.ಗಳಿಂದ 280 ರೂ.ಗಳಿಗೆ ಏರಿಕೆ ಮಾಡಿರುವ ರಾಜ್ಯ ಸರಕಾರವು ಮರಳು ತೆಗೆಯುವ ಕಾನೂನನ್ನೂ ಸರಳಗೊಳಿಸದೆ ಜನರಿಗೆ ಕದಿಯಲು ಪ್ರೇರಣೆ ನೀಡುತ್ತಿದೆ. ಕೆಂಪು ಕಲ್ಲು ಹಾಗೂ ಮರಳಿನ...