ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವೆನೆ ಮಾಡುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೋಲೀಸ್ ಸಿಬ್ಬಂದಿ ಮೇಲೆ ಅರೋಪಿಯೋರ್ವ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಗ್ರಾಮದ ಫರಂಗಿಪೇಟೆ ಎಂಬಲ್ಲಿ ನಡೆದಿದ್ದು, ಆರೋಪಿಯನ್ನು ಪೋಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ ಘಟನೆ ನಡೆದಿದೆ. ಜೂನ್ 28 ರಂದು ಘಟನೆ ನಡೆದಿದೆಯಾದರೂ ,ಈ ಕುರಿತು ಮಾಹಿತಿ ಮಾತ್ರ ತಡವಾಗಿ ಲಭ್ಯವಾಗಿದೆ.


ಫರಂಗಿಪೇಟೆ ನಿವಾಸಿ ಜಾಕೀರ್ ಯಾನೆ ಜಾಕೀರ್ ಹುಸೈನ್ ಬಂಧಿತ ಆರೋಪಿಯಾಗಿದ್ದಾನೆ.
ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪೋಲೀಸ್ ಸಿಬ್ಬಂದಿ ಅರುಣ ಚೌವ್ಹಾಣ ಎಂಬವರು ಫರಂಗಿಪೇಟೆ ಹೊರಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು,ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಸುಮಾರು 11.15 ರ ಸಮಯದಲ್ಲಿ ತೆರೆದಿರುವ ಅಂಗಡಿ- ಹೋಟೆಲ್ ಗಳನ್ನು ಬಂದ್ ಮಾಡಿಸುತ್ತಿದ್ದ ವೇಳೆ ಕ್ರೇವ್ ಹಬ್ ಹೋಟೆಲ್ ಪಕ್ಕದಲ್ಲಿನ ಕಿರಾಣಿ ಅಂಗಡಿಯ ಎದುರು ಆರೋಪಿತನಾಗಿರುವ ಜಾಕೀರ್ ಹುಸೈನ್ ಅವರು ಮಧ್ಯ ಸೇವೆನೆ ಮಾಡುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಅವ್ಯಾಚ್ಚ ಶಬ್ದಗಳಿಂದ ಬೈದು ಸಮವಸ್ತ್ರವನ್ನು ಎಳೆದುಹರಿದುಹಾಕಿದ್ದಲ್ಲದೆ, ಹಲ್ಲೆ ನಡೆಸಿದ್ದಾರೆ ಎಂದು ಅವರು ಗ್ರಾಮಾಂತರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಆರೋಪಿಯನ್ನು ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.












