Wednesday, February 12, 2025

ರಾಷ್ಟ್ರ ಮಟ್ಟದ ಪೊಲೀಸ್ ಕರ್ತವ್ಯ ಕೂಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಎಂ.ಆರ್. ಅವರಿಗೆ ಗೋಲ್ಡ್ ಮೆಡಲ್

ಬಂಟ್ವಾಳ: ರಾಷ್ಟ ಮಟ್ಟದ ಪೋಲೀಸ್ ಕರ್ತವ್ಯ ಕೂಟದಲ್ಲಿ ಭಾಗವಹಿಸಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ದ.ಕ.ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಎಂ.ಆರ್ ಅವರಿಗೆ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಫೆ.12 ರಿಂದ ಫೆ.16 ರವರೆಗೆ ಉತ್ತರ ಪ್ರದೇಶದ ಲಕ್ಕೋ ದಲ್ಲಿ ಜರುಗಿದ 67ನೇ ರಾಷ್ಟ್ರ ಮಟ್ಟದ ಪೊಲೀಸ್‌ ಕರ್ತವ್ಯಕೂಟದಲ್ಲಿ, ಉಪ್ಪಿನಂಗಡಿ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಹರೀಶ್ ಎಂ.ಆರ್ ರವರು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು. ಅವರುಗಳ ಪೈಕಿ ಹರೀಶ್ ಎಂ.ಆ‌ರ್ ರವರು forensic science written test ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಚಿನ್ನದ ಪದಕ ಗಳಿಸಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...