Monday, February 10, 2025

ಲೋಕ ಸಭಾ ಚುನಾವಣೆಯ ಮುಂಜಾಗ್ರತಾ ಕ್ರಮವಾಗಿ ರೂಟ್ಮಾರ್ಚ್

ಬಂಟ್ವಾಳ, ಮಾ. ೧೮: ಲೋಕ ಸಭಾ ಚುನಾವಣೆಯ ಮುಂಜಾಗ್ರತಾ ಕ್ರಮವಾಗಿ ಬಂಟ್ವಾಳ ತಾಲೂಕಿನ ವಿವಿಧೆಡೆ ಸುರಕ್ಷಾ ಸೀಮಾ ಬಲ್ ಪಡೆಯ ಯೋಧರಿಂದ ಬಂಟ್ವಾಳ ಪೊಲೀಸರ ಸಹಕಾರದೊಂದಿಗೆ ರೂಟ್ಮಾರ್ಚ್ ನಡೆಯಿತು.

ವಿಟ್ಲ ಟೌನ್‌ನಿಂದ ರೂಟ್ ಮಾರ್ಚ್ ಹೊರಟು, ಕನ್ಯಾನ, ಕರೋಪಾಡಿ, ಸಾಲೆತ್ತೂರು ಸಾಗಿತು. ಬಳಿಕ ಫರಂಗಿಪೇಟೆಯಲ್ಲಿ ರೂಟ್ ಮಾರ್ಚ್ ನಡೆಯಿತು. ಚುನಾವಣಾ ಪೂರ್ವ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಮತದಾನದವರೆಗೂ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಈ ಮಾರ್ಚ್ ಹಮ್ಮಿಕೊಳ್ಳಲಾಗಿದೆ.
ಸುರಕ್ಷಾ ಸೀಮಾ ಬಲದ ಕಮಾಂಡೆಡ್, ಬಂಟ್ವಾಳ ಎಎಸ್ಪಿ ಸೈದುಲು ಅಡಾವತ್, ವೃತ್ತ ನಿರೀಕ್ಷಕ ಶರನ್ ಗೌಡ, ಬಂಟ್ವಾಳದ ಎಸ್ಸೈ, ಬಂಟ್ವಾಳ ಸರ್ಕಲ್‌ನ ಎಲ್ಲ ಪೊಲೀಸ್ ಸಿಬ್ಬಂದಿ, ಸುರಕ್ಷಾ ಸೀಮಾ ಬಲದ ಸಿಬ್ಬಂದಿ, ಪೊಲೀಸ್ ವಾಹನಗಳು ಫಥಸಂಚಲನದಲ್ಲಿ ಭಾಗವಹಿಸಿದ್ದವು.

More from the blog

ಬೆಳ್ತಂಗಡಿ : ಗ್ರಾಮ ಆಡಳಿತಾಧಿಕಾರಿಗಳಿಂದ 2 ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಮೇರೆಗೆ ಫೆ. 10 ರಿಂದ ಬೆಳ್ತಂಗಡಿಯಲ್ಲಿ...

ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ನಡೆಯಿತು ಪೂರ್ವಭಾವಿ ಸಭೆ

ಬಂಟ್ವಾಳ:  ಶ್ರೀ ರಾಜರಾಜೇಶ್ವರಿ ದೇವಸ್ಥಾನ ಪೊಳಲಿ ಇಲ್ಲಿ ನಡೆಯುವ ಶತಚಂಡಿಕಯಾಗದ ಹಾಗೂ ಕುಪ್ಪೆಟ್ಟು ಬರ್ಕೆ ಕರ್ಪೆ ಪ್ರತಿಷ್ಠಾ ಮಹೋತ್ಸವದ ಬಗ್ಗೆ ಪೂರ್ವಭಾವಿ ಸಭೆಯು ಕಡೆಗುಂಡ್ಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್...

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...