Wednesday, June 25, 2025

ಪೂಜಾರಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತಾರಾ?

ಮಂಗಳೂರು: ಲೋಕಸಭಾ ಚುನಾವಣೆ ದಿನ ನಿಗದಿಯಾದ ಕೂಡಲೇ ಮಾಜಿ ಕೇಂದ್ರ ಸಚಿವ ಹಿರಿಯ ಕಾಂಗ್ರೇಸ್ ಧುರೀಣ ಬಿ.ಜನಾರ್ಧನ ಪೂಜಾರಿ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಾನು ಒರ್ವ ಆಕಾಂಕ್ಷಿ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.‌
ಹಲವು ಸಮಯದ ಬಳಿಕ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡು ಈ‌ ಹೇಳಿಕೆ ನೀಡಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲು ಎಸ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ ಎನ್. ರಾಜೇಂದ್ರ ಕುಮಾರ್ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂಬ ಮಾಹಿತಿ ತೇಲಿ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜೇಂದ್ರ ಕುಮಾರ್ ವಿರುದ್ಧ ಕಾಂಗ್ರೆಸ್ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜೇಂದ್ರ ಕುಮಾರ್ ದೊಡ್ಡ ಭ್ರಷ್ಟಾಚಾರಿ. ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಧ್ಯಮಗಳಲ್ಲಿ ಬಂದಿದೆ. ಬಡವರ ಹಣವನ್ನು ರಾಜೇಂದ್ರ ಕುಮಾರ್ ನುಂಗಿದ್ದಾರೆ ಎಂದು ಕಿಡಿಕಾರಿದರು.
ಒಂದು ವೇಳೆ ಕಾಂಗ್ರೆಸ್ ಪಕ್ಷ ರಾಜೇಂದ್ರ ಕುಮಾರ್ ರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದರೆ ತಾವು ಅವರ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡುವುದು ಖಚಿತ ಎಂದು ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ನಾನೂ ಟಿಕೆಟ್ ಆಕಾಂಕ್ಷಿ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ. ಟಿಕೆಟ್ ಸಿಕ್ಕಿದರೆ ಸ್ಪರ್ಧೆ ಖಂಡಿತ ಎಂದು ತಿಳಿಸಿದರು.
ಎರಡು ದಿನದಲ್ಲಿ ಸೋನಿಯಾ, ರಾಹುಲ್ ಗಾಂಧಿಯನ್ನು ಭೇಟಿಯಾಗುತ್ತೇನೆ. ಪಕ್ಷದ ಹಿರಿಯ ಪ್ರಭಾವಿ ಮುಖಂಡರನ್ನು ಭೇಟಿಯಾಗಿ ಟಿಕೆಟ್ ಕೇಳುತ್ತೇನೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಎಂ ಎನ್ ರಾಜೇಂದ್ರ ಕುಮಾರ್ ಅವರನ್ನು ಹೊರತುಪಡಿಸಿ ಬೇರೆ ಯಾರಿಗೆ ಟಿಕೆಟ್ ನೀಡಿದರೂ ನನ್ನ ಬೆಂಬಲವಿದೆ ಎಂದು ಪೂಜಾರಿ ಸ್ಪಷ್ಟಪಡಿಸಿದರು.
ಭ್ರಷ್ಟಾಚಾರ ನಿರ್ಮೂಲನೆ ಮೋದಿಯಿಂದ ಮಾತ್ರ ಸಾಧ್ಯ ಎಂದು ಹೇಳಿದ ಪೂಜಾರಿ, ಮೋದಿ ರಾಜಕೀಯವಾಗಿ ಇನ್ನಷ್ಟು ಪ್ರಬಲರಾಗಬೇಕು. ಮೋದಿ ಭ್ರಷ್ಟಚಾರದ ವಿರುದ್ಧ ಹೋರಾಡಿ ಗೆದ್ದಿದ್ದಾರೆ. ಮುಂದೆಯೂ ಗೆಲ್ಲುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

More from the blog

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...